Exodus 16:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆರನೆಯ ದಿನವಾದ ಶುಕ್ರವಾರದಲ್ಲಿ ಜನರು ಎರಡರಷ್ಟನ್ನು ಕೂಡಿಸಿಕೊಂಡರು. ಅವರು ಪ್ರತಿಯೊಬ್ಬನಿಗೆ ಆರು ಸೇರಿನಷ್ಟು ಕೂಡಿಸಿಕೊಂಡರು. ಆದ್ದರಿಂದ ಜನನಾಯಕರೆಲ್ಲರೂ ಬಂದು ಮೋಶೆಗೆ ಇದನ್ನು ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರನೆಯ ದಿನ ಎರಡರಷ್ಟು ಆಹಾರವು, ಅಂದರೆ ಒಬ್ಬೊಬ್ಬನಿಗೆ ಎರಡೆರಡು ಸೇರಿನಂತೆ ಆರಿಸಿ ತುಂಬಿಟ್ಟುಕೊಂಡಿದ್ದರಿಂದ ಸಮೂಹದ ಅಧಿಕಾರಿಗಳೆಲ್ಲರು ಮೋಶೆಯ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದರು.
Kannada BSI Bible 2016
ಆರನೆಯ ದಿನದಲ್ಲಿ ಅವರು ಎರಡರಷ್ಟು ರೊಟ್ಟಿ ಯನ್ನು ಅಂದರೆ ಒಬ್ಬನಿಗೆ ಎರಡು ಓಮೆರದಂತೆ ಕೂಡಿಸಿದ್ದರಿಂದ ಸಭೆಯ ಎಲ್ಲಾ ಅಧಿಕಾರಿಗಳು ಬಂದು ಮೋಶೆಗೆ ತಿಳಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರನೆಯ ದಿನ ಕೂಡಿಸಿಕೊಳ್ಳುವಲ್ಲಿ ಎರಡರಷ್ಟು ಆಹಾರವು ಅಂದರೆ ಒಬ್ಬೊಬ್ಬನಿಗೆ ಎರಡೆರಡು ಗೋಮೆರಿನ ಮೇರೆಗೆ ದೊರೆತದ್ದರಿಂದ ಸಮೂಹದ ಅಧಿಕಾರಿಗಳೆಲ್ಲರು ಮೋಶೆಯ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದರು.
Kannada Bible (KNCL) BSI 2016
ಆರನೆಯ ದಿನ ಎರಡಷ್ಟು ಆಹಾರವನ್ನು ಅಂದರೆ ಒಬ್ಬೊಬ್ಬನಿಗೆ ಎರಡೆರಡು ಹೋಮೆರಿನ ಮೇರೆಗೆ ಕೂಡಿಸಿಕೊಂಡರು. ಆದ್ದರಿಂದ ಸಮಾಜದ ಅಧಿಕಾರಿಗಳೆಲ್ಲರು ಮೋಶೆಯ ಬಳಿಗೆ ಬಂದು ಈ ಸಂಗತಿಯನ್ನು ವರದಿಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರನೆಯ ದಿನದಲ್ಲಿ ಅವರು ಎರಡರಷ್ಟು ಅಂದರೆ ಒಬ್ಬನಿಗೆ ಎರಡು ಓಮೆರದಂತೆ ಕೂಡಿಸಿದ್ದರಿಂದ ಸಭೆಯ ಎಲ್ಲಾ ಅಧಿಕಾರಿಗಳು ಬಂದು ಮೋಶೆಗೆ ತಿಳಿಸಿದರು.