Exodus 16:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಶನಿವಾರದಲ್ಲಿ ಮೋಶೆಯು ಜನರಿಗೆ, “ಈ ದಿನ ಸಬ್ಬತ್ತಾಗಿದೆ. ಇದು ಯೆಹೋವನನ್ನು ಸನ್ಮಾನಿಸುವುದಕ್ಕಿರುವ ವಿಶೇಷವಾದ ವಿಶ್ರಾಂತಿ ದಿನವಾಗಿದೆ. ನೀವು ನಿನ್ನೆಯಿಂದ ಇಟ್ಟುಕೊಂಡಿದ್ದ ಆಹಾರವನ್ನು ಊಟಮಾಡಿರಿ. ಇಂದು ನೀವು ಹೊಲದಲ್ಲಿ ಯಾವ ಆಹಾರವನ್ನೂ ಕಾಣುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮೋಶೆ ಅವರಿಗೆ, “ಈ ಹೊತ್ತು ಅದನ್ನು ಊಟ ಮಾಡಿರಿ. ಈ ದಿನವು ಯೆಹೋವನ ಸಬ್ಬತ್ ದಿನವಾಗಿರುವುದರಿಂದ ಈ ದಿನ ಅದು ಹೊಲದಲ್ಲಿ ಕಾಣಿಸಿಕೊಳ್ಳುವುದಿಲ್ಲ.
Kannada BSI Bible 2016
ಆಗ ಮೋಶೆಯು--ಈ ಹೊತ್ತು ಅದನ್ನು ಊಟಮಾಡಿರಿ, ಯಾಕಂದರೆ ಈ ದಿನವು ಕರ್ತನ ಸಬ್ಬತ್‌ ದಿನವಾಗಿದೆ. ಈ ಹೊತ್ತು ನಿಮಗೆ ಹೊಲದಲ್ಲಿ (ಆಹಾರ) ಸಿಕ್ಕುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮೋಶೆ ಅವರಿಗೆ - ಈ ಹೊತ್ತು ಅದನ್ನು ಊಟ ಮಾಡಿರಿ; ಈ ದಿನವು ಯೆಹೋವನ ಸಬ್ಬತ್ ದಿನವಾದದರಿಂದ ಈ ಹೊತ್ತು ಅದು ಅಡವಿಯಲ್ಲಿ ದೊರೆಯುವದಿಲ್ಲ.
Kannada Bible (KNCL) BSI 2016
ಮೋಶೆ ಅವರಿಗೆ, “ಈ ದಿನ ಅದನ್ನು ಊಟಮಾಡಿ. ಇದು ಸರ್ವೇಶ್ವರನ ಸಬ್ಬತ್ ದಿನವಾದ್ದರಿಂದ ಈ ದಿನ ಅದು ಅಡವಿಯಲ್ಲಿ ದೊರೆಯುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯು, “ಈ ಹೊತ್ತು ಅದನ್ನು ಊಟಮಾಡಿರಿ. ಏಕೆಂದರೆ ಈ ದಿನವು ಯೆಹೋವ ದೇವರ ಸಬ್ಬತ್ ದಿನವಾಗಿದೆ. ಈ ಹೊತ್ತು ನಿಮಗೆ ಹೊಲದಲ್ಲಿ ಆಹಾರ ಸಿಕ್ಕುವುದಿಲ್ಲ.