Exodus 16:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಮೋಶೆಯು ಆರೋನನಿಗೆ, “ಒಂದು ಭರಣಿಯನ್ನು ತೆಗೆದುಕೊಂಡು ಅದರಲ್ಲಿ ಮೂರು ಸೇರಿನಷ್ಟು ಮನ್ನವನ್ನು ತುಂಬಿಸು. ನಿಮ್ಮ ಮುಂದಿನ ಸಂತತಿಯವರು ನೋಡುವುದಕೋಸ್ಕರ ಇದನ್ನು ಉಳಿಸಿ ಯೆಹೋವನ ಮುಂದೆ ಇಡು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಮೋಶೆಯು ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು, ಅದರಲ್ಲಿ ಒಂದು ಸೇರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಇಡಬೇಕು” ಎಂದು ಹೇಳಿದನು.
Kannada BSI Bible 2016
ಮೋಶೆಯು ಆರೋನನಿಗೆ--ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಒಂದು ಓಮೆರ್‌ ಮನ್ನವನ್ನು ಅದರಲ್ಲಿ ಹಾಕಿ ನಿಮ್ಮ ಸಂತತಿಗಳಿಗೋಸ್ಕರ ಇಟ್ಟು ಕೊಳ್ಳುವದಕ್ಕಾಗಿ ಕರ್ತನ ಮುಂದೆ ಇಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಮೋಶೆಯು ಆರೋನನಿಗೆ - ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಅದರಲ್ಲಿ ಒಂದು ಗೋಮೆರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವದಕ್ಕೋಸ್ಕರ ಅದನ್ನು ಯೆಹೋವನ ಸನ್ನಿಧಿಯಲ್ಲಿ ಇಡು ಎಂದು ಹೇಳಿದನು.
Kannada Bible (KNCL) BSI 2016
ಆದಕಾರಣ ಮೋಶೆ ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಅದರಲ್ಲಿ ಮೂರು ಸೇರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕೋಸ್ಕರ ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿಡು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆ ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಒಂದು ಓಮೆರ್ ಮನ್ನವನ್ನು ಅದರಲ್ಲಿ ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕೋಸ್ಕರ ಅದನ್ನು ಯೆಹೋವ ದೇವರ ಮುಂದೆ ಇಡು,” ಎಂದನು.