Exodus 16:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಲವತ್ತು ವರ್ಷಗಳವರೆಗೆ ಜನರು ಮನ್ನವನ್ನು ತಿಂದರು. ಅವರು ವಿಶ್ರಾಂತಿಯ ದೇಶಕ್ಕೆ ಬರುವ ತನಕ, ಅಂದರೆ ಕಾನಾನಿನ ಗಡಿಗೆ ಬರುವವರೆಗೆ ಮನ್ನವನ್ನು ತಿಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು.
Kannada BSI Bible 2016
ಇಸ್ರಾಯೇಲ್‌ ಮಕ್ಕಳು ವಾಸವಾಗಿರತಕ್ಕ ದೇಶಕ್ಕೆ ಬರುವ ವರೆಗೆ ನಾಲ್ವತ್ತು ವರುಷ ಮನ್ನವನ್ನು ತಿಂದರು. ಕಾನಾನ್‌ ದೇಶದ ಮೇರೆಗಳಿಗೆ ಬರುವ ವರೆಗೂ ಅವರು ಮನ್ನವನ್ನು ತಿಂದರು.ಓಮೆರ್‌ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಜನವಾಸವಿರುವ ಪ್ರದೇಶಕ್ಕೆ ಬರುವ ತನಕ ಅಂದರೆ ಕಾನಾನ್ ದೇಶದ ಮೇರೆಯನ್ನು ಸೇರುವ ತನಕ ನಾಲ್ವತ್ತು ವರುಷ ಮನ್ನವನ್ನೇ ಊಟಮಾಡುತ್ತಿದ್ದರು.
Kannada Bible (KNCL) BSI 2016
ಇಸ್ರಯೇಲರು ಜನವಾಸವಿರುವ ಪ್ರದೇಶಕ್ಕೆ ಬರುವ ತನಕ ಅಂದರೆ ಕಾನಾನ್ ನಾಡಿನ ಮೇರೆಯನ್ನು ಸೇರುವ ತನಕ ನಾಲ್ವತ್ತು ವರ್ಷ ಮನ್ನವನ್ನೇ ಊಟ ಮಾಡುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ತಾವು ವಾಸವಾಗಿರತಕ್ಕ ದೇಶಕ್ಕೆ ಬರುವವರೆಗೆ, ನಲವತ್ತು ವರುಷ ಮನ್ನವನ್ನು ತಿಂದರು. ಕಾನಾನ್ ದೇಶದ ಮೇರೆಗಳಿಗೆ ಸೇರುವವರೆಗೂ ಅವರು ಮನ್ನವನ್ನು ತಿಂದರು.