Exodus 16:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋವನು ಮೋಶೆಗೆ, ‘ಆಕಾಶದಿಂದ ನಿಮಗೋಸ್ಕರ ರೊಟ್ಟಿ ಸುರಿಯುವಂತೆ ಮಾಡುವೆನು. ಪ್ರತಿದಿನ ಅವರು ಹೊರಗೆ ಹೋಗಿ, ತಮಗೆ ಆ ದಿನದಲ್ಲಿ ತಿನ್ನಲು ಬೇಕಾದ ಆಹಾರವನ್ನು ಕೂಡಿಸಿಕೊಳ್ಳಬೇಕು. ನಾನು ಹೇಳುವುದನ್ನು ಅವರು ಮಾಡುತ್ತಾರೊ ಇಲ್ಲವೊ ಎಂದು ನೋಡಲು ನಾನು ಇದನ್ನು ಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಮೋಶೆಗೆ, “ನಾನು ಆಕಾಶದಿಂದ ನಿಮಗಾಗಿ ಆಹಾರವನ್ನು ಸುರಿಸುತ್ತೇನೆ. ಜನರು ಪ್ರತಿದಿನವೂ ಹೊರಗೆ ಹೋಗಿ ಆ ದಿನಕ್ಕೆ ಬೇಕಾಗುವಷ್ಟನ್ನು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಅವರು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುತ್ತೇನೆ.
Kannada BSI Bible 2016
ಆಗ ಕರ್ತನು ಮೋಶೆಗೆ--ಇಗೋ, ರೊಟ್ಟಿಯನ್ನು ನಿಮಗಾಗಿ ನಾನು ಆಕಾಶದಿಂದ ಸುರಿಸುತ್ತೇನೆ; ಅವರು ನನ್ನ ನ್ಯಾಯಪ್ರಮಾಣದ ಪ್ರಕಾರ ನಡೆದುಕೊಳ್ಳುವರೋ ಇಲ್ಲವೋ ಎಂದು ನಾನು ಅವರನ್ನು ಪರೀಕ್ಷಿಸುವ ಹಾಗೆ ಜನರು ಹೊರಗೆಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದ ದ್ದನ್ನು ಕೂಡಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ಮೋಶೆಗೆ - ಇಗೋ ನಾನು ಆಕಾಶದಿಂದ ನಿಮಗೋಸ್ಕರ ಆಹಾರವನ್ನು ಸುರಿಸುವೆನು. ಈ ಜನರು ಪ್ರತಿದಿನವೂ ಹೊರಗೆ ಹೋಗಿ ಆಯಾ ದಿನಕ್ಕೆ ಬೇಕಾದಷ್ಟು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಇವರು ನನ್ನ ಬೋಧನೆಯನ್ನು ಅನುಸರಿಸಿ ನಡೆಯುವವರೋ ಅಲ್ಲವೋ ಎಂದು ಪರೀಕ್ಷಿಸಿ ತಿಳಿಯುತ್ತೇನೆ.
Kannada Bible (KNCL) BSI 2016
ಆಗ ಸರ್ವೇಶ್ವರ, “ಇಗೋ ನೋಡು, ಆಕಾಶದಿಂದ ನಿಮಗೋಸ್ಕರ ಆಹಾರವನ್ನು ಸುರಿಸುವೆನು. ಈ ಜನರು ಪ್ರತಿದಿನವು ಹೊರಗೆ ಹೋಗಿ ಆಯಾ ದಿನಕ್ಕೆ ಬೇಕಾದಷ್ಟು ಮಾತ್ರ ಕೂಡಿಸಿಕೊಳ್ಳಬೇಕು. ನನ್ನ ಕಟ್ಟಳೆಯ ಪ್ರಕಾರ ನಡೆಯುವರೋ ಇಲ್ಲವೋ ಎಂದು ಇದರಿಂದ ಪರೀಕ್ಷಿಸಿ ತಿಳಿಯುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಮೋಶೆಗೆ, “ನಾನು ರೊಟ್ಟಿಯನ್ನು ನಿಮಗಾಗಿ ಆಕಾಶದಿಂದ ಸುರಿಸುತ್ತೇನೆ. ಜನರು ಹೊರಗೆ ಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದದ್ದನ್ನು ಕೂಡಿಸಲಿ. ಇದರಿಂದ ಅವರು ನನ್ನ ಆಜ್ಞೆಗಳನ್ನು ಕೈಗೊಳ್ಳುವರೋ, ಇಲ್ಲವೋ ಎಂಬುದನ್ನು ಪರೀಕ್ಷಿಸುತ್ತೇನೆ.