Exodus 16:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರತಿದಿನವು ಅವರು ಒಂದು ದಿನಕ್ಕೆ ಬೇಕಾದಷ್ಟು ಆಹಾರವನ್ನು ಕೂಡಿಸಿಕೊಳ್ಳಬೇಕು. ಆದರೆ ಶುಕ್ರವಾರ ಅವರು ತಮ್ಮ ಆಹಾರವನ್ನು ಸಿದ್ಧಪಡಿಸುವಾಗ ಎರಡು ದಿನಗಳಿಗೆ ಬೇಕಾದಷ್ಟು ಆಹಾರವಿರುವುದನ್ನು ಅವರು ನೋಡುವರು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆರನೆಯ ದಿನದಲ್ಲಿ ಮಾತ್ರ ಅವರು ತಂದದ್ದನ್ನು ಸಿದ್ಧಮಾಡುವಾಗ ಅದು ಪ್ರತಿದಿನದಲ್ಲಿ ಕೂಡಿಸಿಕೊಂಡದ್ದಕ್ಕಿಂತಲೂ ಎರಡರಷ್ಟಾಗಿರುವುದು” ಎಂದು ಹೇಳಿದನು.
Kannada BSI Bible 2016
ಆರನೆಯ ದಿವಸದಲ್ಲಿ ಅವರು ತಂದದ್ದನ್ನು ಸಿದ್ಧಮಾಡುವಾಗ ಪ್ರತಿದಿನದಲ್ಲಿ ಕೂಡಿಸು ವದಕ್ಕಿಂತ ಎರಡರಷ್ಟಾಗಿರುವದು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆರನೆಯ ದಿನದಲ್ಲಿ ಮಾತ್ರ ಅವರು ತಂದದ್ದನ್ನು ಸಿದ್ಧಪಡಿಸಿಕೊಳ್ಳುವಾಗ ಅದು ಪ್ರತಿದಿನ ಕೂಡಿಸಿಕೊಂಡದ್ದಕ್ಕಿಂತಲೂ ಎರಡರಷ್ಟಾಗಿರುವದು ಎಂದು ಹೇಳಿದನು.
Kannada Bible (KNCL) BSI 2016
ಆರನೆಯ ದಿನದಲ್ಲಿ ಮಾತ್ರ ಪ್ರತಿದಿನ ಕೂಡಿಸಿದ್ದಕ್ಕಿಂತಲೂ ಎರಡರಷ್ಟು ಕೂಡಿಸಿ ಸಿದ್ಧಪಡಿಸಿಕೊಳ್ಳಬೇಕು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆರನೆಯ ದಿವಸದಲ್ಲಿ ಮಾತ್ರ ಅವರು ತಂದದ್ದನ್ನು ಸಿದ್ಧಪಡಿಸಿಕೊಳ್ಳುವಾಗ, ಪ್ರತಿದಿನ ಕೂಡಿಸುವುದಕ್ಕಿಂತಲೂ ಎರಡರಷ್ಟಾಗಿರುವುದು,” ಎಂದು ಹೇಳಿದರು.