Exodus 16:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಮೋಶೆಯು ಮತ್ತು ಆರೋನನು ಇಸ್ರೇಲರಿಗೆ, “ಈ ರಾತ್ರಿ ನೀವು ಯೆಹೋವನ ಶಕ್ತಿಯನ್ನು ನೋಡುವಿರಿ. ನಿಮ್ಮನ್ನು ಈಜಿಪ್ಟಿನಿಂದ ರಕ್ಷಿಸಿದವನು ಆತನೇ ಎಂದು ತಿಳಿದುಕೊಳ್ಳುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಮತ್ತು ಆರೋನರು ಇಸ್ರಾಯೇಲರಿಗೆ, “ನಿಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾತನು ಯೆಹೋವನೇ ಎಂಬುದು ಇಂದು ಸಾಯಂಕಾಲದಲ್ಲಿ ನಿಮಗೆ ಗೊತ್ತಾಗುವುದು.
Kannada BSI Bible 2016
ಆಗ ಮೋಶೆ ಆರೋನರು ಇಸ್ರಾಯೇಲ್‌ ಮಕ್ಕಳಿ ಗೆಲ್ಲಾ--ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದಾತನು ಕರ್ತನೇ ಎಂದು ಸಾಯಂಕಾಲವಾ ದಾಗ ನಿಮಗೆ ತಿಳಿಯುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಆರೋನರು ಇಸ್ರಾಯೇಲ್ಯರೆಲ್ಲರಿಗೆ - ನಿಮ್ಮನ್ನು ಐಗುಪ್ತದೇಶದಿಂದ ಬಿಡಿಸಿದವನು ಯೆಹೋವನೇ ಎಂಬದು ಸಾಯಂಕಾಲದಲ್ಲಿ ನಿಮಗೆ ಗೊತ್ತಾಗುವದು;
Kannada Bible (KNCL) BSI 2016
ಮೋಶೆ ಮತ್ತು ಆರೋನರು ಇಸ್ರಯೇಲರೆಲ್ಲರನ್ನು ಉದ್ದೇಶಿಸಿ, “ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದವರು ಸರ್ವೇಶ್ವರ ಸ್ವಾಮಿಯೇ ಎಂಬುದು ಈ ಸಂಜೆ ನಿಮಗೆ ಗೊತ್ತಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆ, ಆರೋನರು ಇಸ್ರಾಯೇಲರಿಗೆಲ್ಲಾ, “ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದವರು ಯೆಹೋವ ದೇವರೇ, ಎಂದು ಸಾಯಂಕಾಲವಾದಾಗ ನಿಮಗೆ ತಿಳಿಯುವುದು.