Exodus 16:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲದೆ ಮೋಶೆಯು, “ನೀವು ಗುಣುಗುಟ್ಟುತ್ತಿರುವುದನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ರಾತ್ರಿಯಲ್ಲಿ ಆತನು ನಿಮಗೆ ಮಾಂಸವನ್ನು ಕೊಡುವನು. ಪ್ರತಿ ಮುಂಜಾನೆ ನಿಮಗೆ ಬೇಕಾದಷ್ಟು ರೊಟ್ಟಿಯು ದೊರಕುವುದು. ನೀವು (ಆರೋನನ ಮೇಲೂ ನನ್ನ ಮೇಲೂ) ಗುಣುಗುಟ್ಟುತ್ತಿದ್ದೀರಿ? ಆದರೆ ನಮಗೆ ದೂರು ಹೇಳಲು ನಾವೆಷ್ಟರವರು? ನೀವು ಯೆಹೋವನ ವಿರುದ್ಧವಾಗಿ ದೂರು ಹೇಳುತ್ತಿದ್ದೀರೆಂಬುದು ನಿಮ್ಮ ಜ್ಞಾಪಕದಲ್ಲಿರಲಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮೋಶೆ, “ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನಿಮ್ಮ ಗುಣುಗುಟ್ಟುವಿಕೆಯು ಯೆಹೋವನಿಗೆ ಕೇಳಿಸಿತು. ನಾನು ಮತ್ತು ಆರೋನನು ಎಷ್ಟರವರು? ನಿಮ್ಮ ಗುಣುಗುಟ್ಟುವಿಕೆ ಯೆಹೋವನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ” ಎಂದನು.
Kannada BSI Bible 2016
ಆಗ ಮೋಶೆಯು--ಸಾಯಂಕಾಲದಲ್ಲಿ ಕರ್ತನು ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಕರ್ತನಿಗೆ ಕೇಳಿಸಿದವು. ಆ ಗುಣುಗುಟ್ಟುವಿಕೆಯು ಕರ್ತನಿಗೇ ಹೊರತು ನಮ ಗಲ್ಲ. ನಾವು ಎಷ್ಟು ಮಾತ್ರದವರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ - ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಯೆಹೋವನಿಗೆ ಕೇಳಿಸಿದವು; ಆ ಗುಣುಗುಟ್ಟುವಿಕೆ ಯೆಹೋವನಿಗೇ ಹೊರತು ನಮಗಲ್ಲ; ನಾವು ಎಷ್ಟು ಮಾತ್ರದವರು ಎಂದನು.
Kannada Bible (KNCL) BSI 2016
ಮೋಶೆ, “ಸಂಜೆ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನು ಕೊಡುವವರು ಸರ್ವೇಶ್ವರ. ನಾವು ಎಷ್ಟು ಮಾತ್ರದವರು? ಗೊಣಗುಟ್ಟುವ ನಿಮ್ಮ ಮಾತುಗಳು ಸರ್ವೇಶ್ವರನಿಗೆ ಕೇಳಿಸಿವೆ. ಆ ಗೊಣಗುಟ್ಟುವಿಕೆ ಸರ್ವೇಶ್ವರನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆ ಮುಂದುವರಿಸಿ, “ಸಂಜೆಯಲ್ಲಿ ಯೆಹೋವ ದೇವರು ನಿಮಗೆ ಮಾಂಸಾಹಾರವನ್ನೂ, ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ಕೊಡುವರು. ನಿಮ್ಮ ಗೊಣಗುಟ್ಟುವಿಕೆಯು ಯೆಹೋವ ದೇವರಿಗೆ ಹೊರತು ನಮಗಲ್ಲ. ನಾವು ಎಷ್ಟು ಮಾತ್ರದವರು,” ಎಂದನು.