Exodus 16:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಮೋಶೆ ಆರೋನನಿಗೆ, “ಇಸ್ರೇಲರೊಂದಿಗೆ ಮಾತಾಡು. ಅವರಿಗೆ, ‘ಯೆಹೋವನ ಮುಂದೆ ಒಟ್ಟಾಗಿ ನೆರೆದು ಬನ್ನಿ: ಯಾಕೆಂದರೆ ಆತನು ನಿಮ್ಮ ಗುಣುಗುಟ್ಟುವಿಕೆಗಳನ್ನು ಕೇಳಿದ್ದಾನೆ’ ಎಂದು ಹೇಳು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಆರೋನನಿಗೆ, “ನೀನು ಇಸ್ರಾಯೇಲರ ಸಮೂಹದ ಬಳಿಗೆ ಹೋಗಿ ಅವರಿಗೆ, ‘ಯೆಹೋವನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ. ಆದುದರಿಂದ ನೀವೆಲ್ಲರೂ ಆತನ ಸನ್ನಿಧಿಗೆ ಒಟ್ಟಾಗಿ ಸೇರಿ ಬರಬೇಕೆಂದು ಆಜ್ಞಾಪಿಸು’” ಎಂದು ಹೇಳಿದನು.
Kannada BSI Bible 2016
ಮೋಶೆಯು ಆರೋನನಿಗೆ--ನೀನು ಇಸ್ರಾ ಯೇಲ್ ಮಕ್ಕಳ ಸಭೆಗೆಲ್ಲಾ--ನಿಮ್ಮ ಗುಣುಗುಟ್ಟುವಿಕೆ ಯನ್ನು ಕರ್ತನು ಕೇಳಿದ್ದರಿಂದ ನೀವು ಆತನ ಸವಿಾಪಕ್ಕೆ ಆತನ ಮುಂದೆ ಬನ್ನಿರಿ ಎಂದು ಹೇಳು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಮೋಶೆಯು ಆರೋನನಿಗೆ - ನೀನು ಇಸ್ರಾಯೇಲ್ಯರ ಸಮೂಹದ ಬಳಿಗೆ ಹೋಗಿ ಅವರಿಗೆ - ಯೆಹೋವನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನಾದದರಿಂದ ನೀವೆಲ್ಲರೂ ಆತನ ಸನ್ನಿಧಿಗೆ ಕೂಡಿ ಬರಬೇಕೆಂದು ಆಜ್ಞಾಪಿಸು ಎಂದು ಹೇಳಿದನು.
Kannada Bible (KNCL) BSI 2016
ಆರೋನನಿಗೆ ಮೋಶೆ, “ನೀನು ಇಸ್ರಯೇಲ್ ಸಮಾಜದ ಬಳಿಗೆ ಹೋಗಿ, ಅವರಿಗೆ, ‘ಸರ್ವೇಶ್ವರ ನಿಮ್ಮ ಗೊಣಗಾಟವನ್ನು ಕೇಳಿದ್ದಾರೆ. ಆದ್ದರಿಂದ ನೀವೆಲ್ಲರು ಅವರ ಸನ್ನಿಧಿಗೆ ಕೂಡಿಬರಬೇಕು, ಎಂದು ಆಜ್ಞಾಪಿಸು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಮೋಶೆ ಆರೋನನಿಗೆ, “ನೀನು ಇಸ್ರಾಯೇಲರ ಸಮೂಹಕ್ಕೆ, ‘ನಿಮ್ಮ ಗೊಣಗುಟ್ಟುವಿಕೆಯನ್ನು ಯೆಹೋವ ದೇವರು ಕೇಳಿದ್ದರಿಂದ ನೀವು ಅವರ ಮುಂದೆ ಬನ್ನಿರಿ,’ ಎಂದು ಹೇಳು,” ಎಂದನು.