Exodus 17:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸ್ವಲ್ಪ ಸಮಯದ ನಂತರ ಮೋಶೆಯ ತೋಳುಗಳು ಆಯಾಸಗೊಂಡವು. ಆದ್ದರಿಂದ ಅವರು ಒಂದು ದೊಡ್ಡಕಲ್ಲನ್ನು ಇಟ್ಟು ಮೋಶೆಯನ್ನು ಅದರ ಮೇಲೆ ಕುಳ್ಳಿರಿಸಿದರು. ಬಳಿಕ ಆರೋನನು ಮತ್ತು ಹೂರನು ಮೋಶೆಯ ಕೈಗಳನ್ನು ಮೇಲೆತ್ತಿ ಹಿಡಿದುಕೊಂಡರು. ಆರೋನನು ಮೋಶೆಯ ಒಂದು ಕಡೆಯಲ್ಲಿದ್ದನು; ಹೂರನು ಮೋಶೆಯ ಇನ್ನೊಂದು ಕಡೆಯಲ್ಲಿದ್ದನು. ಸೂರ್ಯನು ಮುಳುಗುವವರೆಗೆ ಅವರು ಅವನ ಕೈಗಳನ್ನು ಮೇಲೆತ್ತಿ ಹಿಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯ ಕೈಗಳು ಭಾರವಾದಾಗ, ಆರೋನ ಮತ್ತು ಹೂರನು ಒಂದು ಕಲ್ಲನ್ನು ತಂದು ಇಟ್ಟರು. ಮೋಶೆಯು ಅದರ ಮೇಲೆ ಕುಳಿತುಕೊಂಡನು. ಆರೋನನು ಒಂದು ಕಡೆಯಲ್ಲಿಯೂ, ಹೂರನು ಇನ್ನೊಂದು ಕಡೆಯಲ್ಲಿಯೂ ನಿಂತುಕೊಂಡು ಮೋಶೆಯ ಕೈಗಳನ್ನು ಎತ್ತಿ ಹಿಡಿಯಲು ಸಹಾಯ ಮಾಡಿದರು. ಹೀಗೆ ಅವನ ಕೈಗಳು ಸೂರ್ಯನು ಮುಳುಗುವವರೆಗೆ ಕೆಳಗಿಳಿಸದೆ ಇದ್ದರು.
Kannada BSI Bible 2016
ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಒಂದು ಕಲ್ಲನ್ನು ತಂದು ಅವನ ಕೆಳಗೆ ಇಟ್ಟಾಗ ಅವನು ಅದರ ಮೇಲೆ ಕೂತುಕೊಂಡನು. ಆರೋನನೂ ಹೂರನೂ ಒಬ್ಬನು ಒಂದು ಕಡೆಯಲ್ಲಿಯೂ ಇನ್ನೊಬ್ಬನು ಇನ್ನೊಂದು ಕಡೆಯಲ್ಲಿಯೂ ಅವನ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವ ವರೆಗೆ ಅವನ ಕೈಗಳು ಇಳಿಯದೇ ಇದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಮೋಶೆಯ ಕೈಗಳು ಭಾರವಾದದರಿಂದ ಆರೋನ ಹೂರರು ಒಂದು ಕಲ್ಲನ್ನು ತಂದಿಟ್ಟು ಅದರ ಮೇಲೆ ಅವನನ್ನು ಕೂಡ್ರಿಸಿ ಬಲಗಡೆ ಒಬ್ಬನು ಎಡಗಡೆ ಒಬ್ಬನು ಅವನ ಕೈಗಳಿಗೆ ಆಧಾರಕೊಟ್ಟರು. ಈ ರೀತಿಯಲ್ಲಿ ಅವನ ಕೈಗಳು ಹೊತ್ತು ಮುಣುಗುವ ತನಕ ಇಳಿಯದೆ ನಿಂತೇ ಇದ್ದವು.
Kannada Bible (KNCL) BSI 2016
ಹೀಗಿರಲು ಮೋಶೆಯ ಕೈಗಳು ಆಯಾಸಗೊಳ್ಳುತ್ತಿದ್ದುದರಿಂದ ಆರೋನ ಮತ್ತು ಹೂರನು ಒಂದು ಕಲ್ಲನ್ನು ತಂದಿಟ್ಟು ಅದರ ಮೇಲೆ ಮೋಶೆಯನ್ನು ಕುಳ್ಳಿರಿಸಿದರು. ಅಲ್ಲದೆ ಬಲಗಡೆ ಒಬ್ಬನು ಎಡಗಡೆ ಒಬ್ಬನು ನಿಂತು ಅವನ ಕೈಗಳಿಗೆ ಆಧಾರಕೊಟ್ಟರು. ಈ ರೀತಿಯಾಗಿ ಅವನ ಕೈಗಳು ಹೊತ್ತು ಮುಳುಗುವ ತನಕ ಇಳಿಯದೆ ನಿಂತೇ ಇರುವಂತೆ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಕಲ್ಲನ್ನು ತಂದು ಇಟ್ಟಾಗ, ಅವನು ಅದರ ಮೇಲೆ ಕೂತುಕೊಂಡನು. ಆರೋನನು ಒಂದು ಕಡೆಯಲ್ಲಿಯೂ, ಹೂರನು ಇನ್ನೊಂದು ಕಡೆಯಲ್ಲಿಯೂ ಮೋಶೆಯ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವವರೆಗೆ ಅವನ ಕೈಗಳು ಇಳಿಯದೆ ನಿಂತೇ ಇದ್ದವು.