Exodus 17:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೆಹೋವನು ಮೋಶೆಗೆ, “ಈ ಯುದ್ಧದ ಕುರಿತು ಬರೆ: ಜನರು ಇಲ್ಲಿ ನಡೆದದ್ದನ್ನು ಜ್ಞಾಪಿಸಿಕೊಳ್ಳುವಂತೆ ಈ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ನಾನು ಅಮಾಲೇಕ್ಯರನ್ನು ಭೂಮಿಯ ಮೇಲಿಂದ ಸಂಪೂರ್ಣವಾಗಿ ನಾಶಮಾಡುವೆನೆಂದು ಯೆಹೋಶುವನಿಗೆ ಹೇಳಲು ಮರೆಯಬೇಡ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಮೋಶೆಗೆ, “ಇದನ್ನು ಜ್ಞಾಪಕಾರ್ಥಕವಾಗಿ ಒಂದು ಗ್ರಂಥದಲ್ಲಿ ಬರೆ. ಅದನ್ನು ಯೆಹೋಶುವನಿಗೆ ತಿಳಿಸು. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಮಿಯ ಮೇಲೆ ಇರದಂತೆ ಸಂಪೂರ್ಣವಾಗಿ ನಾಶಮಾಡಿ ಬಿಡುವೆನು” ಎಂದು ಹೇಳಿದನು.
Kannada BSI Bible 2016
ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ಮೋಶೆಗೆ - ಭೂವಿುಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು; ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ, ಮತ್ತು ಯೆಹೋಶುವನಿಗೆ ಮಂದಟ್ಟು ಮಾಡಿಕೊಡು ಎಂದು ಹೇಳಿದನು.
Kannada Bible (KNCL) BSI 2016
ಆಗ ಸರ್ವೇಶ್ವರ, “ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು ಎಂಬ ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ ಮತ್ತು ಯೆಹೋಶುವನಿಗೆ ಮನದಟ್ಟಾಗುವಂತೆ ಮಾಡು” ಎಂದು ಮೋಶೆಗೆ ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಮೋಶೆಗೆ, “ಇದನ್ನು ಜ್ಞಾಪಕಾರ್ಥವಾಗಿ ಗ್ರಂಥದಲ್ಲಿ ಬರೆ. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಲೋಕದಲ್ಲಿ ಇರದಂತೆ ಸಂಪೂರ್ಣವಾಗಿ ಅಳಿಸಿಬಿಡುವೆನು. ಇದನ್ನು ಯೆಹೋಶುವನಿಗೆ ಮನದಟ್ಟಾಗುವಂತೆ ಹೇಳು,” ಎಂದರು.