Exodus 17:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆ, “ನಾನು ನನ್ನ ಕೈಗಳನ್ನು ಯೆಹೋವನ ಸಿಂಹಾಸನದ ಕಡೆಗೆ ಎತ್ತಿದೆನು. ಆದ್ದರಿಂದ ಯೆಹೋವನು ಎಂದಿನಂತೆ ಅಮಾಲೇಕ್ಯರ ವಿರುದ್ಧವಾಗಿ ಯುದ್ಧಮಾಡಿದನು” ಅಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು, “ಅಮಾಲೇಕ್ಯರ ಕೈಯು ಯೆಹೋವನ ಸಿಂಹಾಸನಕ್ಕೆ ವಿರೋಧವಾಗಿ ಎತ್ತಲ್ಪಟ್ಟಿದ್ದರಿಂದ ಯೆಹೋವನ ಸಿಂಹಾಸನದಾಣೆಗೂ ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಗಳಲ್ಲಿ ಯುದ್ಧವಿರುವುದು” ಎಂದನು.
Kannada BSI Bible 2016
ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಹುವಿನ ಸಿಂಹಾಸನದ ಆಣೆ, ಅಮಾಲೇಕ್ಯರ ಮೇಲೆ ಯೆಹೋವನಿಗೆ ತಲತಲಾಂತರಕ್ಕೂ ಯುದ್ಧವಿರುವದು ಅಂದನು.
Kannada Bible (KNCL) BSI 2016
ಅಲ್ಲದೆ, “ಸರ್ವೇಶ್ವರನ ಪತಾಕೆಯನ್ನು ಎತ್ತಿಹಿಡಿಯಿರಿ. ಅಮಾಲೇಕ್ಯರ ಮೇಲೆ ಸರ್ವೇಶ್ವರನಿಗೆ ತಲತಲಾಂತರಕ್ಕೂ ಯುದ್ಧವಿರುವುದು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಮೋಶೆ, “ಯೆಹೋವ ದೇವರ ಸಿಂಹಾಸನಕ್ಕೆ ವಿರೋಧವಾಗಿ ಅಮಾಲೇಕ್ಯರ ಕೈಗಳು ಎತ್ತಿದ್ದರಿಂದ, ಯೆಹೋವ ದೇವರು ತಲತಲಾಂತರಗಳಲ್ಲಿ ಅಮಾಲೇಕ್ಯರ ವಿರುದ್ಧ ಯುದ್ಧಮಾಡುವರು,” ಎಂದನು.