Exodus 17:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಅವರು ಮೋಶೆಗೆ ವಿರುದ್ಧವಾಗಿ ದಂಗೆ ಎದ್ದು ಅವನೊಡನೆ ವಾಗ್ವಾದ ಮಾಡತೊಡಗಿದರು. “ನಮಗೆ ಕುಡಿಯಲು ನೀರು ಕೊಡು” ಎಂದು ಅವರು ಕೇಳಿದರು. ಮೋಶೆ ಅವರಿಗೆ, “ನೀವು ಯಾಕೆ ನನಗೆ ವಿರುದ್ಧವಾಗಿ ದಂಗೆಯೆದ್ದಿರಿ? ನೀವು ಯಾಕೆ ಯೆಹೋವನನ್ನು ಪರೀಕ್ಷಿಸುತ್ತಿದ್ದೀರಿ? ಯೆಹೋವನು ನಮ್ಮೊಡನೆ ಇಲ್ಲವೆಂದು ನೀವು ಭಾವಿಸುತ್ತೀರೋ?” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಜನರು ಮೋಶೆಯ ಮೇಲೆ ಗುಣುಗುಟ್ಟುತ್ತಾ, “ನಮಗೆ ಕುಡಿಯುವುದಕ್ಕೆ ನೀರು ದೊರಕಿಸಿಕೊಡಬೇಕು” ಎಂದು ಗದ್ದಲವೆಬ್ಬಿಸಲು, ಮೋಶೆಯು ಅವರಿಗೆ, “ನನ್ನ ಸಂಗಡ ಏಕೆ ಜಗಳವಾಡುತ್ತೀರಿ? ಯೆಹೋವನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.
Kannada BSI Bible 2016
ಆದಕಾರಣ ಜನರು ಮೋಶೆಯ ಸಂಗಡ ವಿವಾದಮಾಡಿ--ನಮಗೆ ಕುಡಿ ಯುವದಕ್ಕೆ ನೀರು ಕೊಡು ಅಂದಾಗ ಮೋಶೆಯು ಅವರಿಗೆ--ಯಾಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಕರ್ತನನ್ನು ಯಾಕೆ ಪರೀಕ್ಷಿಸುತ್ತೀರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕುಡಿಯುವದಕ್ಕೆ ನೀರಿಲ್ಲದ ಕಾರಣ ಜನರು ಮೋಶೆಯ ಸಂಗಡ ವಾದಿಸುತ್ತಾ - ನಮಗೆ ಕುಡಿಯುವದಕ್ಕೆ ನೀರು ದೊರಕಿಸಿಕೊಡಬೇಕು ಎಂದು ಹೇಳಿದಾಗ ಮೋಶೆ - ನೀವು ನನ್ನ ಸಂಗಡ ವಾದಿಸುವದೇನು? ಯೆಹೋವನನ್ನು ಯಾಕೆ ಪರೀಕ್ಷಿಸುತ್ತೀರಿ ಎಂದು ಅವರಿಗೆ ಹೇಳಿದನು.
Kannada Bible (KNCL) BSI 2016
ಅಲ್ಲಿ ಕುಡಿಯುವುದಕ್ಕೆ ನೀರಿರಲಿಲ್ಲ. ಜನರು ಮೋಶೆಯ ಸಂಗಡ ಜಗಳವಾಡುತ್ತಾ, “ನಮಗೆ ಕುಡಿಯುವುದಕ್ಕೆ ನೀರು ತೋರಿಸಬೇಕು,” ಎಂದು ಹೇಳಿದರು. ಆಗ ಮೋಶೆ, “ನೀವು ನನ್ನ ಸಂಗಡ ವಾದಿಸುವುದೇಕೆ? ಸರ್ವೇಶ್ವರನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಜನರು ಮೋಶೆಯ ಸಂಗಡ ವಿವಾದ ಮಾಡಿ, “ನಮಗೆ ಕುಡಿಯುವುದಕ್ಕೆ ನೀರು ಕೊಡು,” ಎಂದರು. ಮೋಶೆಯು ಅವರಿಗೆ, “ಏಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಯೆಹೋವ ದೇವರನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.