Exodus 17:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಮೋಶೆಗೆ, “ಇಸ್ರೇಲ್ ಜನರ ಮುಂದೆ ಹೋಗು. ನಿನ್ನೊಡನೆ ಜನರ ಕೆಲವು ಹಿರಿಯರನ್ನು ಕರೆದುಕೊ. ನಿನ್ನ ಊರುಗೋಲನ್ನು ಹಿಡಿದುಕೊಂಡು ಹೋಗು. ನೀನು ನೈಲ್ ನದಿಯನ್ನು ಹೊಡೆಯಲು ಉಪಯೋಗಿಸಿದ ಕೋಲು ಇದಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೆಹೋವನು ಮೋಶೆಗೆ, “ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಇಸ್ರಾಯೇಲರ ಹಿರಿಯರಲ್ಲಿ ಕೆಲವರನ್ನು ಕರೆದುಕೊಂಡು ಜನರ ಮುಂದೆ ಹೊರಟು, ನಾನು ತೋರಿಸುವ ಸ್ಥಳಕ್ಕೆ ಹೋಗು.
Kannada BSI Bible 2016
ಆಗ ಕರ್ತನು ಮೋಶೆಗೆ--ಜನರ ಮುಂದೆ ಹಾದು ಹೋಗಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರನ್ನು ಕರಕೊಂಡು ನೀನು ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಯೆಹೋವನು - ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಇಸ್ರಾಯೇಲ್ಯರ ಹಿರಿಯರಲ್ಲಿ ಕೆಲವರನ್ನು ಕರಕೊಂಡು ಜನರ ಮುಂದೆ ಹೊರಟು [ನಾನು ತೋರಿಸುವ ಸ್ಥಳಕ್ಕೆ] ಹೋಗು.
Kannada Bible (KNCL) BSI 2016
ಅದಕ್ಕೆ ಸರ್ವೇಶ್ವರ, “ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು, ಇಸ್ರಯೇಲರ ಹಿರಿಯರಲ್ಲಿ ಕೆಲವರನ್ನು ಕರೆದುಕೊಂಡು, ನಾನು ತೋರಿಸುವ ಸ್ಥಳಕ್ಕೆ ಜನರ ಮುಂದೆ ಹೋಗು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಮೋಶೆಗೆ, “ಜನರ ಮುಂದೆ ಹಾದು ಹೋಗಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರನ್ನು ಕರಕೊಂಡು ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು.