Exodus 17:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆ ಆ ಸ್ಥಳಕ್ಕೆ ಮಸ್ಸಾ ಮತ್ತು ಮೆರೀಬಾ ಎಂದು ಹೆಸರಿಟ್ಟನು. ಯಾಕೆಂದರೆ ಈ ಸ್ಥಳದಲ್ಲಿ ಇಸ್ರೇಲರು ಅವನಿಗೆ ವಿರುದ್ಧವಾಗಿ ದಂಗೆ ಎದ್ದು ಯೆಹೋವನನ್ನು ಪರೀಕ್ಷಿಸಿದರು. ಯೆಹೋವನು ಅವರೊಡನೆ ಇದ್ದಾನೋ ಇಲ್ಲವೋ ಎಂದು ಜನರು ತಿಳಿಯಬಯಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ?” ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ, ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ಗದ್ದಲ ಮಾಡಿದ್ದರಿಂದ ಅದಕ್ಕೆ ಮೆರೀಬಾ ಎಂತಲೂ ಹೆಸರಿಟ್ಟನು.
Kannada BSI Bible 2016
ಅವನು ಆ ಸ್ಥಳಕ್ಕೆ ಮಸ್ಸಾ ಮೆರಿಬಾ ಎಂದು ಹೆಸರಿಟ್ಟನು. ಯಾಕಂದರೆ ಅಲ್ಲಿ ಇಸ್ರಾಯೇಲ್‌ ಮಕ್ಕಳು ವಿವಾದ ಮಾಡಿದರು.-- ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಪರೀಕ್ಷಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ವಿವಾದ ಮಾಡಿದ್ದರಿಂದ ಮೆರೀಬಾ ಎಂತಲೂ ಹೆಸರಿಟ್ಟನು.
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ತಮ್ಮ ಮಧ್ಯೆ ಇದ್ದಾರೋ ಇಲ್ಲವೋ ಎಂದು ಇಸ್ರಯೇಲರು ಅಲ್ಲಿ ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ‘ಮಸ್ಸಾ’ ಎಂತಲೂ ಜನರು ತನ್ನೊಡನೆ ವಾಗ್ವಾದ ಮಾಡಿದ್ದರಿಂದ ‘ಮೆರೀಬಾ’ ಎಂತಲೂ ಹೆಸರಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯೆಹೋವ ದೇವರು ತಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ,” ಎಂದು ಜನರು ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂದು ಹೆಸರಿಟ್ಟನು. ಅಲ್ಲಿ ಇಸ್ರಾಯೇಲರು ತನ್ನೊಡನೆ ವಿವಾದ ಮಾಡಿದ್ದರಿಂದ ಮೆರೀಬಾ ಎಂತಲೂ ಹೆಸರಿಟ್ಟನು.