Exodus 17:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಮೋಶೆ ಯೆಹೋಶುವನಿಗೆ, “ಕೆಲವು ಪುರುಷರನ್ನು ಆರಿಸಿಕೊಂಡು, ನಾಳೆ ಅಮಾಲೇಕ್ಯರೊಡನೆ ಯುದ್ಧಮಾಡು. ನಾನು ಬೆಟ್ಟದ ತುದಿಯಲ್ಲಿ ನಿಂತು ಗಮನಿಸುವೆನು, ದೇವರು ನನಗೆ ಕೊಟ್ಟ ಊರುಗೋಲನ್ನು ನಾನು ಹಿಡಿದುಕೊಂಡಿರುವೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮೋಶೆಯು ಯೆಹೋಶುವನಿಗೆ, “ನೀನು ನಮ್ಮ ಜನರಲ್ಲಿ ಕೆಲವರನ್ನು ಆರಿಸಿಕೊಂಡು ಅಮಾಲೇಕ್ಯರೊಡನೆ ಯುದ್ಧಮಾಡಬೇಕು. ನಾನು ನಾಳೆ ದೇವರ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು” ಎಂದು ಹೇಳಿದನು.
Kannada BSI Bible 2016
ಆಗ ಮೋಶೆಯು ಯೆಹೋಶುವನಿಗೆ--ನೀನು ನಮ ಗಾಗಿ ಮನುಷ್ಯರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟುಹೋಗು; ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದು ಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯು ಯೆಹೋಶುವನಿಗೆ - ನೀನು ಭಟರನ್ನು ಆದುಕೊಂಡು ನಾಳೆ ನಮ್ಮ ಮುಂದೆ ಹೊರಟು ಅಮಾಲೇಕ್ಯರೊಡನೆ ಯುದ್ಧಮಾಡಬೇಕು; ನಾನು ದೇವದಂಡವನ್ನು ಕೈಯಲ್ಲಿ ಹಿಡುಕೊಂಡು ಗುಡ್ಡದ ತುದಿಯಲ್ಲಿ ನಿಂತುಕೊಳ್ಳುವೆನು ಎಂದು ಹೇಳಿದನು.
Kannada Bible (KNCL) BSI 2016
‘ಮೋಶೆ ಯೆಹೋಶುವನಿಗೆ, “ನೀನು ಯೋಧರನ್ನು ಆರಿಸಿಕೊಂಡು ನಾಳೆ ನಮ್ಮ ಪರವಾಗಿ ಹೊರಟು ಅಮಾಲೇಕ್ಯರೊಡನೆ ಯುದ್ಧಮಾಡು. ನಾನು ದೇವದಂಡವನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ತುದಿಯಲ್ಲಿ ನಿಂತುಕೊಳ್ಳುವೆನು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯು ಯೆಹೋಶುವನಿಗೆ, “ನೀನು ನಮ್ಮ ಜನರಲ್ಲಿ ಕೆಲವರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗು. ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು,” ಎಂದನು.