Exodus 18:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯ ಮಾವನಾದ ಇತ್ರೋನನು ಮಿದ್ಯಾನಿನಲ್ಲಿ ಯಾಜಕನಾಗಿದ್ದನು. ಮೋಶೆಗೆ ಮತ್ತು ಇಸ್ರೇಲರಿಗೆ ದೇವರು ಅನೇಕ ರೀತಿಗಳಲ್ಲಿ ಸಹಾಯ ಮಾಡಿದ್ದರ ಬಗ್ಗೆ, ಯೆಹೋವನು ಇಸ್ರೇಲರನ್ನು ಈಜಿಪ್ಟಿನಿಂದ ಹೊರಗೆ ನಡಿಸಿದ್ದರ ಬಗ್ಗೆ ಇತ್ರೋನನು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಮೋಶೆಗೂ ತನ್ನ ಜನರಾದ ಇಸ್ರಾಯೇಲರಿಗೂ ಮಹೋಪಕಾರಗಳನ್ನು ಮಾಡಿದ್ದನ್ನೂ, ಯೆಹೋವನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಕರತಂದದ್ದನ್ನೂ, ಮಿದ್ಯಾನ್ಯರ ಆಚಾರ್ಯನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿದನು.
Kannada BSI Bible 2016
ದೇವರು ಮೋಶೆಗೆ ಮಾಡಿದವುಗಳೆಲ್ಲವನ್ನೂ ಕರ್ತನು ಇಸ್ರಾಯೇಲ್ಯರನ್ನು ಐಗುಪ್ತದೊಳಗಿಂದ ಹೊರಗೆ ತಂದದ್ದನ್ನೂ ಮಿದ್ಯಾ ನಿನ ವೈದಿಕನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿ
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಮೋಶೆಗೂ ತನ್ನ ಜನರಾದ ಇಸ್ರಾಯೇಲ್ಯರಿಗೂ ಮಹೋಪಕಾರಗಳನ್ನು ಮಾಡಿದ್ದನ್ನೂ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ಕರತಂದದ್ದನ್ನೂ ವಿುದ್ಯಾನ್ಯರ ಆಚಾರ್ಯನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿದಾಗ
Kannada Bible (KNCL) BSI 2016
ಇತ್ರೋ, ಮೋಶೆಯ ಮಾವ ಹಾಗೂ ಮಿದ್ಯಾನರ ಪೂಜಾರಿ. ದೇವರು ಮೋಶೆಗೂ ತಮ್ಮ ಜನರಾದ ಇಸ್ರಯೇಲರಿಗೂ ಮಾಡಿದ ಮಹಾತ್ಕಾರ್ಯಗಳನ್ನು ಕುರಿತು ಇವನು ಕೇಳಿದ್ದನು. ಸರ್ವೇಶ್ವರ ಸ್ವಾಮಿ ಹೇಗೆ ಇಸ್ರಯೇಲರನ್ನು ಈಜಿಪ್ಟಿನಿಂದ ಕರೆದುತಂದರೆಂಬ ವಿಷಯ ಇವನಿಗೆ ಮುಟ್ಟಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಮೋಶೆಗೂ, ತಮ್ಮ ಜನರಾದ ಇಸ್ರಾಯೇಲರಿಗೂ ಮಾಡಿದವುಗಳೆಲ್ಲವನ್ನೂ ಯೆಹೋವ ದೇವರು ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದದ್ದನ್ನೂ, ಮಿದ್ಯಾನಿನ ಯಾಜಕನೂ, ಮೋಶೆಯ ಮಾವನೂ ಆಗಿದ್ದ ಇತ್ರೋವನಿಗೆ ಮುಟ್ಟಿತು.