Exodus 18:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಜಿಪ್ಟಿನವರು ತಾವು ಇಸ್ರೇಲರಿಗಿಂತಲೂ ಉತ್ತಮರೆಂದು ಭಾವಿಸಿಕೊಂಡಿದ್ದರು. ಆದರೆ ಯೆಹೋವನು ಅವರನ್ನು ತಗ್ಗಿಸಿದ್ದರಿಂದ ಎಲ್ಲಾ ದೇವರುಗಳಲ್ಲಿ ಆತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡೆನು”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ, ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ” ಅಂದನು.
Kannada BSI Bible 2016
ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನೇ ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ ಅಂದನು.
Kannada Bible (KNCL) BSI 2016
ಆತ ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಈಜಿಪ್ಟಿನವರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲೇ ಅವರನ್ನು ತಗ್ಗಿಸಿದ್ದಾನೆ. ಆದ್ದರಿಂದ ಸರ್ವೇಶ್ವರ ಸ್ವಾಮಿಯೇ ಎಲ್ಲ ದೇವರುಗಳಿಗಿಂತ ದೊಡ್ಡವರೆಂದು ಈಗ ತಿಳಿದುಕೊಂಡಿದ್ದೇನೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಲಾ ದೇವರುಗಳಿಗಿಂತ ಯೆಹೋವ ದೇವರೇ ದೊಡ್ಡವರೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಏಕೆಂದರೆ ಈಜಿಪ್ಟಿನವರು ಗರ್ವಪಟ್ಟಿದ್ದರಿಂದ ಯೆಹೋವ ದೇವರು ಅವರನ್ನು ತಗ್ಗಿಸಿದರು,” ಎಂದನು.