Exodus 18:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇತ್ರೋನನು ದೇವರಿಗೆ ಯಜ್ಞಗಳನ್ನು, ಕಾಣಿಕೆಗಳನ್ನು ಕೊಟ್ಟನು. ಆಗ ಆರೋನನು ಮತ್ತು ಇಸ್ರೇಲರ ಎಲ್ಲಾ ಹಿರಿಯರು ಮೋಶೆಯ ಮಾವನಾದ ಇತ್ರೋನನೊಡನೆ ದೇವರ ಸನ್ನಿಧಿಯಲ್ಲಿ ಊಟಮಾಡಲು ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದನು. ಆರೋನನು, ಇಸ್ರಾಯೇಲರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವುದಕ್ಕೆ ಬಂದರು.
Kannada BSI Bible 2016
ಮೋಶೆಯ ಮಾವನಾದ ಇತ್ರೋವನು ದಹನಬಲಿಯನ್ನೂ ಯಜ್ಞ ಗಳನ್ನೂ ತೆಗೆದುಕೊಂಡು ದೇವರಿಗೆ ಅರ್ಪಿಸಿದನು. ಆಗ ಆರೋನನೂ ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನ ಮಾಡುವದಕ್ಕಾಗಿ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಲಾಗಿ ಆರೋನನೂ ಇಸ್ರಾಯೇಲ್ಯರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವದಕ್ಕೆ ಬಂದರು.
Kannada Bible (KNCL) BSI 2016
ಅದೂ ಅಲ್ಲದೆ ಮೋಶೆಯ ಮಾವ ಇತ್ರೋ ದೇವರಿಗೆ ದಹನ ಬಲಿಯನ್ನು ಹಾಗು ಇತರ ಬಲಿಗಳನ್ನು ಸಮರ್ಪಿಸಿದನು. ಆರೋನನು ಹಾಗು ಇಸ್ರಯೇಲರ ಹಿರಿಯರೆಲ್ಲರು ಬಂದು ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯ ಮಾವ ಇತ್ರೋವನು ದಹನಬಲಿಯನ್ನೂ, ಯಜ್ಞಗಳನ್ನೂ ದೇವರಿಗಾಗಿ ತೆಗೆದುಕೊಂಡು ಬಂದನು. ಆರೋನನೂ, ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನವನ್ನು ಮಾಡುವುದಕ್ಕೆ ಬಂದರು.