Exodus 18:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮರುದಿನ ಮೋಶೆಯು ಜನರಿಗೆ ನ್ಯಾಯನಿರ್ಣಯ ಮಾಡಲು ತನ್ನ ಆಸನದ ಮೇಲೆ ಕುಳಿತುಕೊಂಡನು. ಅಲ್ಲಿ ಬಹಳ ಜನರಿದ್ದರು, ಆದ್ದರಿಂದ ಅವರು ಮುಂಜಾನೆಯಿಂದ ಸಾಯಂಕಾಲದವರೆಗೆ ಅವನ ಸುತ್ತಲೂ ನಿಂತುಕೊಂಡಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮರುದಿನ ಮೋಶೆ ಜನರಿಗೆ ನ್ಯಾಯತೀರಿಸುವುದಕ್ಕಾಗಿ ಕುಳಿತಿರಲು ಮುಂಜಾನೆಯಿಂದ ಸಾಯಂಕಾಲದವರೆಗೂ ಜನರು ಅವನ ಹತ್ತಿರ ನಿಂತಿದ್ದರು.
Kannada BSI Bible 2016
ಮರುದಿನದಲ್ಲಿ ಮೋಶೆಯು ಜನರಿಗೆ ನ್ಯಾಯತೀರಿಸುವದಕ್ಕೆ ಕೂತುಕೊಂಡಾಗ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ಮೋಶೆಯ ಬಳಿಯಲ್ಲಿ ನಿಂತಿ ದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಾರಣೆದಿನ ಮೋಶೆ ಜನರಿಗೆ ನ್ಯಾಯತೀರಿಸುವದಕ್ಕಾಗಿ ಕೂತಿರಲು ಪ್ರಾತಃಕಾಲದಿಂದ ಸಾಯಂಕಾಲದವರೆಗೂ ಜನರು ಅವನ ಹತ್ತಿರ ನಿಂತಿದ್ದರು.
Kannada Bible (KNCL) BSI 2016
ಮಾರನೆಯ ದಿನ ಮೋಶೆ ಜನರಿಗೆ ನ್ಯಾಯ ತೀರಿಸಲು ಕುಳಿತಿದ್ದನು. ಬೆಳಿಗ್ಗೆಯಿಂದ ಸಂಜೆಯವರೆಗೂ ಜನರು ಅವನ ಸುತ್ತಲು ನಿಂತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರುದಿನ ಮೋಶೆಯು ಜನರಿಗೆ ನ್ಯಾಯತೀರಿಸುವುದಕ್ಕೆ ಕೂತುಕೊಂಡಾಗ, ಜನರು ಬೆಳಗಿನಿಂದ ಸಂಜೆಯವರೆಗೆ ಮೋಶೆಯ ಬಳಿಯಲ್ಲಿ ನಿಂತಿದ್ದರು.