Exodus 18:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ಜನರ ನ್ಯಾಯತೀರಿಸುವುದನ್ನು ಇತ್ರೋನನು ನೋಡಿ, “ನೀನು ಯಾಕೆ ಹೀಗೆ ಮಾಡುತ್ತಿರುವೆ? ನೀನೊಬ್ಬನೇ ಯಾಕೆ ನ್ಯಾಯತೀರಿಸಬೇಕು? ಜನರು ದಿನವೆಲ್ಲಾ ನಿನ್ನ ಬಳಿಗೆ ಯಾಕೆ ಬರಬೇಕು?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಜನರಿಗಾಗಿ ಮಾಡುತ್ತಿರುವುದೆಲ್ಲವನ್ನು ಮಾವನು ನೋಡಿ ಅವನಿಗೆ, “ನೀನು ಯಾತಕ್ಕೆ ಜನರಿಗಾಗಿ ಇಷ್ಟು ಪ್ರಯಾಸ ಪಡುತ್ತಿರುವೆ? ನೀನು ಒಬ್ಬನೇ ನ್ಯಾಯತೀರಿಸುವುದಕ್ಕೆ ಕುಳಿತಿರುವುದೇಕೆ?” ಎಂದು ಕೇಳಿದನು.
Kannada BSI Bible 2016
ಮೋಶೆಯು ಜನರಿಗೆ ಮಾಡುವದನ್ನೆಲ್ಲಾ ಮೋಶೆಯ ಮಾವನು ನೋಡಿ ಮೋಶೆಗೆ--ಇದೇನು ಜನರಿಗೆ ನೀನು ಮಾಡುವದು? ಯಾಕೆ ನೀನೊಬ್ಬನೇ ಕೂತಿರಲಾಗಿ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ನಿನ್ನ ಬಳಿಯಲ್ಲಿ ನಿಂತಿದ್ದಾರೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯು ಜನರಿಗೋಸ್ಕರ ಮಾಡಿದ್ದೆಲ್ಲವನ್ನೂ ಅವನ ಮಾವನು ನೋಡಿ ಅವನಿಗೆ - ನೀನು ಯಾತಕ್ಕೆ ಜನರಿಗೊಸ್ಕರ ಇಷ್ಟು ಪ್ರಯಾಸಪಡುತ್ತಿ? ಪ್ರಾತಃಕಾಲ ಮೊದಲುಗೊಂಡು ಸಾಯಂಕಾಲದವರೆಗೂ ಜನರು ನಿನ್ನ ಹತ್ತಿರ ನಿಲ್ಲುತ್ತಾರಲ್ಲಾ;
Kannada Bible (KNCL) BSI 2016
ಮೋಶೆ ಜನರಿಗಾಗಿ ಮಾಡುತ್ತಿದ್ದುದ್ದೆಲ್ಲವನ್ನು ಅವನ ಮಾವ ನೋಡಿ, “ಜನರಿಗೋಸ್ಕರ ಇಷ್ಟು ಪ್ರಯಾಸಪಡುತ್ತಿರುವೆ ಏಕೆ? ಬೆಳಿಗ್ಗೆಯಿಂದ ಸಂಜೆಯವರೆಗೂ ಜನರು ನಿನ್ನ ಸುತ್ತಲೂ ನಿಂತುಕೊಂಡಿದ್ದಾರೆ; ನೀನೊಬ್ಬನೇ ನ್ಯಾಯ ತೀರಿಸಲು ಕುಳಿತುಕೊಳ್ಳಬೇಕೆ?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇತ್ರೋವನು ಮೋಶೆಯು ಜನರಿಗಾಗಿ ಮಾಡುವುದನ್ನೆಲ್ಲಾ ನೋಡಿದಾಗ, ಅವನು ಮೋಶೆಗೆ, “ಇದೇನು ಜನರಿಗೆ ನೀನು ಮಾಡುವುದು? ಏಕೆ ನೀನೊಬ್ಬನೇ ನ್ಯಾಯಾಧೀಶನಾಗಿ ಕೂತಿರಲಾಗಿ, ಜನರು ಬೆಳಗಿನಿಂದ ಸಂಜೆಯವರೆಗೆ ನಿನ್ನ ಬಳಿಯಲ್ಲಿ ನಿಂತಿರಬೇಕು?” ಎಂದನು.