Exodus 18:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೇಳು, ನಾನು ನಿನಗೆ ಕೆಲವು ಸಲಹೆಗಳನ್ನು ಕೊಡುವೆನು. ಯೆಹೋವನು ನಿನ್ನೊಡನೆ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ನೀನು ಮಾಡಬೇಕಾದದ್ದು ಇವೇ: ಜನರ ವ್ಯಾಜ್ಯಗಳನ್ನು ನೀನು ಕೇಳುವುದನ್ನು ಮುಂದುವರಿಸಬೇಕು; ಈ ಸಂಗತಿಗಳ ಬಗ್ಗೆ ನೀನು ದೇವರೊಂದಿಗೆ ಮಾತಾಡುವುದನ್ನೂ ಮುಂದುವರಿಸಬೇಕು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಮಾತನ್ನು ಕೇಳು. ನಾನು ನಿನಗೆ ಒಂದು ಆಲೋಚನೆಯನ್ನು ಹೇಳುತ್ತೇನೆ ಮತ್ತು ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗೂ, ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಹತ್ತಿರಕ್ಕೆ ತರಬೇಕು.
Kannada BSI Bible 2016
ಆದದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ; ದೇವರು ನಿನ್ನ ಸಂಗಡ ಇರಲಿ; ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು ಅವರ ವ್ಯಾಜ್ಯಗಳನ್ನು ಆತನ ಮುಂದೆ ತರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಮಾತನ್ನು ಕೇಳು, ನಾನು ನಿನಗೆ ಒಂದು ಆಲೋಚನೆಯನ್ನು ಹೇಳುತ್ತೇನೆ; ಮತ್ತು ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗೂ ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಹತ್ತಿರಕ್ಕೆ ತರಬೇಕು;
Kannada Bible (KNCL) BSI 2016
ಆದ್ದರಿಂದ ನನ್ನ ಮಾತನ್ನು ಕೇಳು; ನಾನು ಕೊಡುವ ಸಲಹೆಯನ್ನು ಗಮನಿಸು, ದೇವರು ನಿನ್ನೊಡನೆ ಇರುವರು. ನೀನು ಜನರಿಗೂ ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಮುಂದೆ ತರುವುದೇನೋ ಸರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ. ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು, ಅವರ ವ್ಯಾಜ್ಯಗಳನ್ನು ದೇವರ ಮುಂದೆ ತರಬೇಕು.