Exodus 18:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ದೇವರ ಕಟ್ಟಳೆಗಳನ್ನು ಮತ್ತು ಬೋಧನೆಗಳನ್ನು ಜನರಿಗೆ ಬೋಧಿಸಬೇಕು; ನಿಬಂಧನೆಗಳನ್ನು ಉಲ್ಲಂಘಿಸದಂತೆ ಅವರನ್ನು ಎಚ್ಚರಿಸಬೇಕು; ಜೀವಿಸಲು ಸರಿಯಾದ ಮಾರ್ಗವನ್ನು ಅವರಿಗೆ ಬೋಧಿಸಬೇಕು; ಅವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ದೇವರ ಆಜ್ಞಾವಿಧಿಗಳನ್ನು ಬೋಧಿಸಿ, ಅವರು ನಡೆಯಬೇಕಾದ ಮಾರ್ಗವನ್ನೂ, ಮಾಡಬೇಕಾದ ಕಾರ್ಯಗಳನ್ನೂ ಅವರಿಗೆ ತಿಳಿಯಪಡಿಸಬೇಕು.
Kannada BSI Bible 2016
ನೇಮಕಗಳನ್ನೂ ನ್ಯಾಯ ಪ್ರಮಾಣಗಳನ್ನೂ ಅವರಿಗೆ ಕಲಿಸಿ, ಅವರು ಹೋಗ ತಕ್ಕ ಮಾರ್ಗವನ್ನೂ ಅವರು ಮಾಡತಕ್ಕ ಕೆಲಸವನ್ನೂ ಅವರಿಗೆ ತೋರಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನೀನು ದೇವರ ಆಜ್ಞಾವಿಧಿಗಳನ್ನು ಬೋಧಿಸಿ ಅವರು ನಡೆಯಬೇಕಾದ ಮಾರ್ಗವನ್ನೂ ಮಾಡಬೇಕಾದ ಕಾರ್ಯಗಳನ್ನೂ ಅವರಿಗೆ ತಿಳಿಯಪಡಿಸಬೇಕು.
Kannada Bible (KNCL) BSI 2016
ಅಂತೆಯೇ ದೇವರ ಆಜ್ಞಾವಿಧಿಗಳನ್ನು ಜನರಿಗೆ ಬೋಧಿಸಿ ಅವರು ನಡೆಯಬೇಕಾದ ಮಾರ್ಗವನ್ನು ಹಾಗು ಕೈಗೊಳ್ಳಬೇಕಾದ ಕಾರ್ಯಗಳನ್ನು ತಿಳಿಯಪಡಿಸಲೇಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಯಮಗಳನ್ನೂ, ಆಜ್ಞೆಗಳನ್ನೂ ಅವರಿಗೆ ಕಲಿಸಿ, ಅವರು ನಡೆಯಬೇಕಾದ ಮಾರ್ಗವನ್ನೂ, ಅವರು ಮಾಡಬೇಕಾದ ಕೆಲಸವನ್ನೂ ಅವರಿಗೆ ತೋರಿಸಬೇಕು.