Exodus 18:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀನು ಜನರೊಳಗೆ ದೇವಭಕ್ತರೂ ಲಂಚಮುಟ್ಟದವರೂ ಆಗಿರುವವರನ್ನು ಆರಿಸಿಕೊಳ್ಳಬೇಕು. ಅವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ, ಭಕ್ತರೂ, ನಂಬಿಗಸ್ತರೂ, ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.
Kannada BSI Bible 2016
ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀನು ಸಮಸ್ತ ಜನರೊಳಗೆ ಸಮರ್ಥರೂ ದೇವಭಕ್ತರೂ ನಂಬಿಗಸ್ತರೂ ಲಂಚಮುಟ್ಟದವರೂ ಆಗಿರುವ ಪುರುಷರನ್ನು ಆರಿಸಿಕೊಂಡು ಅವರನ್ನು ಸಾವಿರ ಮಂದಿಯ ಮೇಲೆಯೂ ನೂರು ಮಂದಿಯ ಮೇಲೆಯೂ ಐವತ್ತು ಮಂದಿಯ ಮೇಲೆಯೂ ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇವಿುಸಬೇಕು.
Kannada Bible (KNCL) BSI 2016
ಆದರೆ ನೀನು ಈ ಜನರಲ್ಲೆಲ್ಲಾ ಸಮರ್ಥರು, ದೇವಭಕ್ತರು, ನಂಬಿಗಸ್ಥರು ಹಾಗು ಲಂಚ ಮುಟ್ಟದವರು ಆಗಿರುವ ವ್ಯಕ್ತಿಗಳನ್ನು ಆರಿಸಿಕೊ. ಅಂಥವರನ್ನು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಅಧಿಪತಿಗಳನ್ನಾಗಿ ನೇಮಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯಪಡುವವರೂ, ಸತ್ಯವಂತರೂ, ದುರಾಶೆಯನ್ನು ಹಗೆಮಾಡುವವರೂ ಆಗಿರುವವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸು.