Exodus 18:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಅಧಿಕಾರಿಗಳು ಜನರಿಗೆ ನ್ಯಾಯತೀರಿಸಲಿ. ಬಹಳ ಪ್ರಾಮುಖ್ಯವಾದ ವ್ಯಾಜ್ಯವಿದ್ದರೆ, ತೀರ್ಮಾನಕ್ಕಾಗಿ ಅವರು ನಿನ್ನ ಬಳಿಗೆ ಬರಬಹುದು. ಆದರೆ ಇತರ ವ್ಯಾಜ್ಯಗಳನ್ನು ಅವರೇ ತೀರ್ಮಾನಿಸಿಕೊಳ್ಳಬಹುದು. ಈ ರೀತಿಯಾಗಿ ಮಾಡಿದರೆ, ಅದು ನಿನಗೆ ಸುಲಭವಾಗುವುದು. ಮಾತ್ರವಲ್ಲದೆ, ಈ ಜನರು ನಿನ್ನ ಕೆಲಸವನ್ನು ತಮ್ಮೊಳಗೆ ಹಂಚಿಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರೇ ಯಾವಾಗಲೂ ಜನರಿಗೆ ನ್ಯಾಯವನ್ನು ತೀರಿಸಲಿ. ಅವರು ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಸಣ್ಣ ವ್ಯಾಜ್ಯಗಳನ್ನೆಲ್ಲಾ ಅವರೇ ತೀರಿಸಲಿ. ಅವರು ನಿನ್ನೊಂದಿಗೆ ಈ ಭಾರವನ್ನು ಹೊರುವುದರಿಂದ ನಿನಗೆ ಸುಲಭವಾಗುವುದು.
Kannada BSI Bible 2016
ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ದೊಡ್ಡ ವ್ಯಾಜ್ಯ ಗಳನ್ನೆಲ್ಲಾ ನಿನ್ನ ಮುಂದೆ ತಂದು ಸಣ್ಣಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಬೇಕು. ಹೀಗೆ ನಿನಗೆ ಸುಲಭವಾಗು ವದು. ಅವರು ನಿನ್ನ ಸಂಗಡ ಭಾರವನ್ನು ಹೊರುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರೇ ಯಾವಾಗಲೂ ಜನರಿಗೆ ನ್ಯಾಯವನ್ನು ತೀರಿಸಲಿ. ಅವರು ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ; ಸಣ್ಣ ವ್ಯಾಜ್ಯಗಳನ್ನೆಲ್ಲಾ ತಾವೇ ತೀರಿಸಲಿ. ಅವರು ನಿನ್ನೊಂದಿಗೆ ಈ ಭಾರವನ್ನು ಹೊರುವದರಿಂದ ನಿನಗೆ ಸುಲಭವಾಗಿರುವದು.
Kannada Bible (KNCL) BSI 2016
ಅವರೇ ಸದಾ ಜನರಿಗೆ ನ್ಯಾಯ ತೀರಿಸಲಿ; ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಆಗ ಅವರೂ ಈ ಹೊಣೆಯನ್ನು ಹೊರುವುದರಿಂದ ನಿನ್ನ ಹೊರೆ ಹಗುರವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಎಲ್ಲಾ ಕಾಲಗಳಲ್ಲಿಯೂ ಜನರಿಗೆ ನ್ಯಾಯತೀರಿಸಲಿ. ಆದರೆ ದೊಡ್ಡ ವ್ಯಾಜ್ಯಗಳನ್ನೆಲ್ಲಾ ನಿನ್ನ ಮುಂದೆ ತಂದು, ಸಣ್ಣ ವ್ಯಾಜ್ಯಗಳನ್ನೆಲ್ಲಾ ತಾವೇ ತೀರಿಸಲಿ. ಆಗ ನಿನಗೆ ಸುಲಭವಾಗುವುದು. ಅವರೂ ನಿನ್ನ ಸಂಗಡ ಭಾರವನ್ನು ಹೊರುವರು.