Exodus 18:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಈ ಸಂಗತಿಗಳನ್ನು ಮಾಡಿದರೆ, ಯೆಹೋವನ ಚಿತ್ತವಿದ್ದರೆ, ನೀನು ನಿನ್ನ ಕೆಲಸವನ್ನು ಮಾಡುತ್ತಾ ಮುಂದುವರಿಯಲು ಶಕ್ತನಾಗುವೆ ಮತ್ತು ಅದೇ ಸಮಯದಲ್ಲಿ ಜನರೆಲ್ಲರೂ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಂಡು ಮನೆಗೆ ಹೋಗಬಹುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ನಿನಗೆ ಹೀಗೆ ಮಾಡುವುದಕ್ಕೆ ಅಪ್ಪಣೆಕೊಡುವುದಾದರೆ, ನೀನು ಈ ಕೆಲಸದ ಹೊರೆಯನ್ನು ನಿರ್ವಹಿಸಲು ಸಾಧ್ಯವಾಗುವುದು. ಇದು ಮಾತ್ರವಲ್ಲದೆ ಈ ಜನರೆಲ್ಲರೂ ಸಂತುಷ್ಟರಾಗಿ ತಮ್ಮ ತಮ್ಮ ಮನೆಗಳಿಗೆ ಹೋಗುವರು” ಎಂದು ಹೇಳಿದನು.
Kannada BSI Bible 2016
ಈ ಕಾರ್ಯವನ್ನು ಮಾಡುವದಕ್ಕೆ ದೇವರು ನಿನಗೆ ಅಪ್ಪಣೆಕೊಟ್ಟರೆ ನೀನು ಇದನ್ನು ನಿರ್ವಹಿಸಲು ಶಕ್ತ ನಾಗುವಿ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಹೀಗೆ ಮಾಡುವದಕ್ಕೆ ನಿನಗೆ ಅಪ್ಪಣೆ ಕೊಡುವದಾದರೆ ನೀನು ಈ ಕೆಲಸದ ಭಾರವನ್ನು ನಿರ್ವಹಿಸಲಾಗುವದು; ಇದು ಮಾತ್ರವಲ್ಲದೆ ಈ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಸಂತೋಷವಾಗಿ ಹೋಗುವರು ಎಂದು ಹೇಳಿದನು.
Kannada Bible (KNCL) BSI 2016
ಹೀಗೆ ಮಾಡಲು ದೇವರು ನಿನಗೆ ಅಪ್ಪಣೆ ಕೊಡಲಿ; ಮಾಡಿದರೆ ಈ ಹೊಣೆಯನ್ನು ನಿರ್ವಹಿಸಲು ಶಕ್ತನಾಗುವೆ; ಈ ಜನರೂ ಕೂಡ ಸಂತುಷ್ಟರಾಗಿ ತಮ್ಮ ತಮ್ಮ ಮನೆಗಳಿಗೆ ಹಿಂದಿರುಗುವರು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಕಾರ್ಯವನ್ನು ಮಾಡುವುದಕ್ಕೆ ದೇವರು ನಿನಗೆ ಅಪ್ಪಣೆ ಕೊಟ್ಟರೆ, ಆಗ ನೀನು ಇದನ್ನು ನಿರ್ವಹಿಸಲು ಶಕ್ತನಾಗುವೆ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು,” ಎಂದನು.