Exodus 18:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಅಧಿಕಾರಿಗಳು ಜನರ ನ್ಯಾಯಾಧಿಪತಿಗಳಾಗಿದ್ದರು. ಜನರು ತಮ್ಮ ವ್ಯಾಜ್ಯಗಳನ್ನು ಈ ಅಧಿಕಾರಿಗಳ ಬಳಿಗೆ ಯಾವಾಗಲೂ ತರಬಹುದಾಗಿತ್ತು. ಮೋಶೆಯು ಬಹು ಪ್ರಾಮುಖ್ಯವಾದ ವ್ಯಾಜ್ಯಗಳನ್ನು ಮಾತ್ರ ತೀರ್ಮಾನಿಸುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ಯಾವಾಗಲೂ ಜನರಿಗೆ ನ್ಯಾಯತೀರಿಸುವವರಾಗಿ ಕಠಿಣ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಾ, ಸುಲಭವಾದ ವ್ಯಾಜ್ಯಗಳನ್ನು ತಾವೇ ತೀರಿಸುತ್ತಾ ಬಂದರು.
Kannada BSI Bible 2016
ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಯಾವಾಗಲೂ ಜನರಿಗೆ ನ್ಯಾಯತೀರಿಸುವವರಾಗಿ ಕಠಿಣವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಾ ಸುಲಭ ವ್ಯಾಜ್ಯಗಳನ್ನು ತಾವೇ ತೀರಿಸುತ್ತಾ ಬಂದರು.
Kannada Bible (KNCL) BSI 2016
ಇವರು ಸದಾ ಜನರಿಗೆ ನ್ಯಾಯತೀರಿಸುವವರಾದರು. ಜಟಿಲವಾದ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಿದ್ದರು. ಸುಲಭವಾದುವುಗಳನ್ನು ಅವರೇ ತೀರಿಸುತ್ತಾ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ, ಕಠಿಣ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಿದ್ದರು. ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.