Exodus 18:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇನ್ನೊಬ್ಬ ಮಗನ ಹೆಸರು ಎಲೀಯೆಜೆರ್. ಇವನು ಹುಟ್ಟಿದಾಗ ಮೋಶೆಯು, “ನನ್ನ ತಂದೆಯ ದೇವರು ನನಗೆ ಸಹಾಯ ಮಾಡಿ ಈಜಿಪ್ಟಿನ ಅರಸನಿಂದ ರಕ್ಷಿಸಿದನು” ಎಂದು ಹೇಳಿ ಆ ಹೆಸರನ್ನು ಇಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ಇನ್ನೊಬ್ಬ ಮಗನಿಗೆ ಮೋಶೆಯು, “ನನ್ನ ತಂದೆಯ ದೇವರು ನನಗೆ ಸಹಾಯಕನಾಗಿದ್ದು ನನ್ನನ್ನು ಫರೋಹನ ಕತ್ತಿಗೆ ತಪ್ಪಿಸಿ ಕಾಪಾಡಿದನು” ಎಂದು ಹೇಳಿ, ಆ ಮಗನಿಗೆ “ ಎಲೀಯೆಜೆರ್” ಎಂದು ಹೆಸರಿಟ್ಟನು.
Kannada BSI Bible 2016
ಇನ್ನೊಬ್ಬನ ಹೆಸರು ಎಲೀಯೆಜರ್ ಎಂದಿತ್ತು; ಅವನು ನನ್ನ ತಂದೆಯ ದೇವರು ನನ್ನ ಸಹಾಯಕನಾಗಿದ್ದು ಫರೋಹನ ಕತ್ತಿಯಿಂದ ಬಿಡುಗಡೆ ಮಾಡಿದನು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ತಂದೆಯ ದೇವರು ನನಗೆ ಸಹಾಯಕನಾಗಿದ್ದು ನನ್ನನ್ನು ಫರೋಹನ ಕತ್ತಿಗೆ ತಪ್ಪಿಸಿ ಕಾಪಾಡಿದನು ಎಂದು ಹೇಳಿ ಕಿರೀ ಮಗನಿಗೆ ಎಲೀಯೆಜೆರ್ ಎಂದು ಹೆಸರಿಟ್ಟಿದ್ದನು.
Kannada Bible (KNCL) BSI 2016
ತನ್ನ ತಂದೆಯ ದೇವರು ನನಗೆ ಸಹಾಯಕರಾಗಿದ್ದು ನನ್ನನ್ನು ಫರೋಹನ ಕತ್ತಿಯಿಂದ ಕಾಪಾಡಿದರು ಎಂದು ಕಿರಿಯ ಮಗನಿಗೆ ‘ಎಲಿಯೇಜರ್’ ಎಂದು ಹೆಸರಿಟ್ಟಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ತಂದೆಯ ದೇವರು ನನ್ನ ಸಹಾಯಕನಾಗಿದ್ದು, ಫರೋಹನ ಖಡ್ಗದಿಂದ ಬಿಡುಗಡೆ ಮಾಡಿದನು,” ಎಂದು ಹೇಳಿ ಇನ್ನೊಬ್ಬ ಮಗನಿಗೆ ಎಲೀಯೆಜೆರ್ ಎಂದು ಹೆಸರಿಟ್ಟಿದ್ದನು.