Exodus 18:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇತ್ರೋನನು ಮೋಶೆಗೆ, “ನಾನು ನಿನ್ನ ಮಾವನಾದ ಇತ್ರೋನ. ನಾನು ನಿನ್ನ ಹೆಂಡತಿಯನ್ನು ಮತ್ತು ಆಕೆಯ ಇಬ್ಬರು ಗಂಡುಮಕ್ಕಳನ್ನು ನಿನ್ನ ಬಳಿಗೆ ಕರೆದುಕೊಂಡು ಬರುತ್ತಿದ್ದೇನೆ” ಎಂಬ ಸಂದೇಶವನ್ನು ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಮೋಶೆಗೆ, “ನಿನ್ನ ಮಾವನಾದ ಇತ್ರೋವನಾದ ನಾನು ನಿನ್ನ ಹೆಂಡತಿಯನ್ನು, ನಿನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆ” ಎಂದು ಹೇಳಿ ಕಳುಹಿಸಿದನು.
Kannada BSI Bible 2016
ಆಗ ಅವನು ಮೋಶೆಗೆ--ನಿನ್ನ ಮಾವ ನಾದ ಇತ್ರೋವನೆಂಬ ನಾನು ನಿನ್ನ ಹೆಂಡತಿಯನ್ನೂ ಅವಳ ಇಬ್ಬರು ಮಕ್ಕಳನ್ನೂ ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆಂದು ಹೇಳಿ ಕಳುಹಿಸಿದಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಮೋಶೆಗೆ - ನಿನ್ನ ಮಾವನಾದ ನಾನೂ ನಿನ್ನ ಹೆಂಡತಿಯೂ ಆಕೆಯ ಇಬ್ಬರು ಮಕ್ಕಳೂ ಬಂದಿದ್ದೇವೆಂದು ಹೇಳಿಕಳುಹಿಸಿದಾಗ
Kannada Bible (KNCL) BSI 2016
“ನಿನ್ನ ಮಾವನಾದ ನಾನು, ನಿನ್ನ ಹೆಂಡತಿ ಹಾಗು ನಿನ್ನ ಇಬ್ಬರು ಮಕ್ಕಳು ಬಂದಿದ್ದೇವೆ” ಎಂದು ಮೋಶೆಗೆ ಹೇಳಿ ಕಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು ಮೋಶೆಗೆ, “ನಿನ್ನ ಮಾವ ಇತ್ರೋವನೆಂಬ ನಾನು ನಿನ್ನ ಹೆಂಡತಿ, ಇಬ್ಬರು ಮಕ್ಕಳನ್ನೂ ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆ,” ಎಂದು ಹೇಳಿ ಕಳುಹಿಸಿದನು.