Exodus 18:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಮೋಶೆ ತನ್ನ ಮಾವನನ್ನು ಭೇಟಿಯಾಗಲು ಹೊರಗೆ ಹೋದನು. ಮೋಶೆ ಅವನ ಮುಂದೆ ತಲೆಬಾಗಿ ಅವನಿಗೆ ಮುದ್ದಿಟ್ಟನು. ಅವರಿಬ್ಬರು ಪರಸ್ಪರ ಕ್ಷೇಮ ಸಮಾಚಾರವನ್ನು ವಿಚಾರಿಸಿಕೊಂಡರು. ಬಳಿಕ ಅವರು ಹೆಚ್ಚು ಮಾತಾಡಲು ಮೋಶೆಯ ಡೇರೆಯೊಳಕ್ಕೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ತನ್ನ ಮಾವನನ್ನು ಎದುರುಗೊಳ್ಳುವುದಕ್ಕೆ ಹೊರಟು ಆತನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಗೆ ಹೋದರು.
Kannada BSI Bible 2016
ಮೋಶೆಯು ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮ ಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ಮಾವನನ್ನು ಎದುರುಗೊಳ್ಳುವದಕ್ಕೆ ಹೊರಟು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಕ್ಕೆ ಬಂದರು.
Kannada Bible (KNCL) BSI 2016
ಮೋಶೆ ಹೊರಗೆ ಬಂದು ತನ್ನ ಮಾವನನ್ನು ಎದುರುಗೊಂಡು, ವಂದಿಸಿ, ಮುದ್ದಿಟ್ಟನು. ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಅವರು ಡೇರೆಯೊಳಕ್ಕೆ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಗೆ ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ, ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.