Exodus 19:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೂರನೆಯ ದಿನದಲ್ಲಿ ನನಗಾಗಿ ಸಿದ್ಧರಾಗಬೇಕು. ಮೂರನೆಯ ದಿನದಲ್ಲಿ ನಾನು ಸೀನಾಯ್ ಬೆಟ್ಟದ ಮೇಲೆ ಇಳಿದುಬರುವೆನು; ಜನರೆಲ್ಲರೂ ನನ್ನನ್ನು ನೋಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂರನೆಯ ದಿನದಲ್ಲಿ ಅವರು ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವನು.
Kannada BSI Bible 2016
ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಂಡು ಮೂರನೆಯ ದಿನದಲ್ಲಿ ಸಿದ್ಧರಾಗಿರಬೇಕು. ಮೂರನೆಯ ದಿನದಲ್ಲಿ ಯೆಹೋವನು ಸಮಸ್ತಜನರಿಗೂ ಪ್ರತ್ಯಕ್ಷನಾಗಿ ಸೀನಾಯಿ ಬೆಟ್ಟದ ಮೇಲಕ್ಕೆ ಇಳಿದುಬರುವನು.
Kannada Bible (KNCL) BSI 2016
ಮೂರನೆಯ ದಿನ ಸಿದ್ಧರಾಗಿರಲಿ. ಏಕೆಂದರೆ ಆ ಮೂರನೆಯ ದಿನ ಸರ್ವೇಶ್ವರನಾದ ನಾನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಲು ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೂರನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ. ಏಕೆಂದರೆ ಮೂರನೆಯ ದಿನದಲ್ಲಿ ಯೆಹೋವ ದೇವರು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವರು.