Exodus 19:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 12
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂಥವನನ್ನು ಯಾರೂ ಮುಟ್ಟಬಾರದು. ಕಲ್ಲೆಸೆದು ಅಥವಾ ಬಾಣವನ್ನು ಎಸೆದು ಖಂಡಿತವಾಗಿ ಅವನನ್ನು ಕೊಲ್ಲಬೇಕು. ಮನುಷ್ಯನಾಗಲಿ, ಪಶುಗಳಾಗಲಿ ಬೆಟ್ಟವನ್ನು ಮುಟ್ಟಿದರೆ ಸಾಯಲೇಬೇಕು. ಕೊಂಬಿನ ಧ್ವನಿ ದೀರ್ಘವಾಗಿ ಕೇಳಿಸಿದಾಗ ಅವರು ಬೆಟ್ಟದ ಸಮೀಪಕ್ಕೆ ಬರಬೇಕು” ಎಂದು ಹೇಳು ಎಂದನು.
Kannada BSI Bible 2016
ಯಾವನಾದರೂ ಅದನ್ನು ಮುಟ್ಟಬಾರದು; ಮುಟ್ಟಿದ ಪಶುವನ್ನಾಗಲಿ ಮನುಷ್ಯನನ್ನಾಗಲಿ ನಿಶ್ಚಯ ವಾಗಿ ಕಲ್ಲೆಸೆದು ಕೊಲ್ಲಬೇಕು. ಇಲ್ಲವೆ ಈಟಿಯಿಂದ ತಿವಿಯಬೇಕು. ದೀರ್ಘವಾಗಿ ತುತೂರಿಯು ಊದುವ ಸಮಯದಲ್ಲಿ ಅವರು ಬೆಟ್ಟದ ಮೇಲೆ ಬರಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂಥವನನ್ನು ಯಾರೂ ಮುಟ್ಟಕೂಡದು; ಕಲ್ಲುಗಳನ್ನಾದರೂ ಬಾಣಗಳನ್ನಾದರೂ ಎಸೆದು ಅವನನ್ನು ಕೊಲ್ಲಬೇಕು. ಮನುಷ್ಯನಾಗಲಿ ಪಶುವಾಗಲಿ ಬೆಟ್ಟವನ್ನು ಮುಟ್ಟಿದರೆ ಉಳಿಯಬಾರದು. ಕೊಂಬಿನ ಧ್ವನಿ ಕೇಳಿಸಿದಾಗ ಬೆಟ್ಟದ ಸಮೀಪಕ್ಕೆ ಬರಬೇಕು ಎಂದು ಹೇಳು ಅಂದನು.
Kannada Bible (KNCL) BSI 2016
ಅಂಥವನನ್ನು ಯಾರೂ ಕೈಯಿಂದ ಮುಟ್ಟದೆ ಕಲ್ಲೆಸೆದು ಅಥವಾ ಬಾಣಬಿಟ್ಟು ಕೊಲ್ಲಬೇಕು. ಬೆಟ್ಟವನ್ನು ಮುಟ್ಟಿದವರು ಮನುಷ್ಯನಾಗಿರಲಿ, ಪಶುಪ್ರಾಣಿಯಾಗಲಿ ಉಳಿಯಬಾರದು.’ ಕೊಂಬಿನ ಧ್ವನಿ ಕೇಳಿಸಿದಾಗ ಬೆಟ್ಟವನ್ನೇರಿ ಬರಬೇಕೆಂದು ಹೇಳು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರೂ ಅಂಥವರನ್ನು ಮುಟ್ಟಬಾರದು. ಮುಟ್ಟಿದ ಪಶುವಾಗಲಿ, ಮನುಷ್ಯನಾಗಲಿ ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು. ಇಲ್ಲವೆ ಈಟಿಯಿಂದ ತಿವಿಯಬೇಕು.’ ದೀರ್ಘವಾಗಿ ತುತೂರಿ ಊದುವ ಸಮಯದಲ್ಲಿ ಅವರು ಬೆಟ್ಟದ ಬಳಿಗೆ ಬರಬೇಕು,” ಎಂದರು.