Exodus 19:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೀನಾಯಿ ಬೆಟ್ಟವು ಹೊಗೆಯಿಂದ ಕವಿದುಕೊಂಡಿತು. ಕುಲುಮೆಯಿಂದ ಬರುವ ಹೊಗೆಯಂತೆ, ಬೆಟ್ಟದಿಂದ ಹೊಗೆಯು ಮೇಲಕ್ಕೇರಿತು. ಯೆಹೋವನು ಬೆಂಕಿಯಲ್ಲಿ ಬೆಟ್ಟದ ಮೇಲೆ ಇಳಿದು ಬಂದದ್ದರಿಂದ ಇದು ಸಂಭವಿಸಿತು. ಇಡೀ ಬೆಟ್ಟ ನಡುಗಲಾರಂಭಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
Kannada BSI Bible 2016
ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲಕ್ಕೆ ಇಳಿದು ಬಂದದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು; ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
Kannada Bible (KNCL) BSI 2016
ಸೀನಾಯಿ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತ್ತು. ಏಕೆಂದರೆ ಸರ್ವೇಶ್ವರ ಸ್ವಾಮಿ ಬೆಂಕಿಯ ರೂಪದಲ್ಲಿ ಆ ಬೆಟ್ಟದ ಮೇಲೆ ಇಳಿದುಬಂದಿದ್ದರು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದೂ ಅಲ್ಲದೆ ಬೆಟ್ಟವೆಲ್ಲ ಬಹಳವಾಗಿ ಕಂಪಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಅಗ್ನಿಯೊಳಗೆ ಬೆಟ್ಟದ ಮೇಲೆ ಇಳಿದಿದ್ದರಿಂದ ಸೀನಾಯಿ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.