Exodus 19:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ರೆಫೀದೀಮನ್ನು ಬಿಟ್ಟು ಸೀನಾಯ್ ಮರುಭೂಮಿಗೆ ಬಂದಿದ್ದರು. ಅಲ್ಲಿ ಅವರು ಬೆಟ್ಟದ ಬಳಿ ತಂಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ರೇಫೀದೀಮನ್ನು ಬಿಟ್ಟು ಮರುಭೂಮಿಗೆ ಬಂದು ಮರುಭೂಮಿಯಲ್ಲಿ ಡೇರೆ ಹಾಕಿ ಸೀನಾಯಿ ಬೆಟ್ಟಕ್ಕೆ ಎದುರಾಗಿ ಇಳಿದುಕೊಂಡರು.
Kannada BSI Bible 2016
ಅವರು ರೆಫೀದೀಮಿ ನಿಂದ ಹೊರಟು ಸೀನಾಯಿ ಮರುಭೂಮಿಗೆ ಬಂದು ಅರಣ್ಯದಲ್ಲಿ ಗುಡಾರಹಾಕಿ ಬೆಟ್ಟಕ್ಕೆದುರಾಗಿ ಇಳಿದು ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ರೆಫೀದೀಮನ್ನು ಬಿಟ್ಟು ಆ ಅರಣ್ಯಕ್ಕೆ ಬಂದಾಗ ಅಲ್ಲಿ ಬೆಟ್ಟಕ್ಕೆ ಎದುರಾಗಿ ಇಳುಕೊಂಡರು.
Kannada Bible (KNCL) BSI 2016
ಅವರು ರೆಫೀದೀಮನ್ನು ಬಿಟ್ಟು ಆ ಮರುಭೂಮಿಗೆ ಬಂದು ಅಲ್ಲಿನ ಬೆಟ್ಟಕ್ಕೆ ಎದುರಾಗಿ ಇಳಿದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ರೆಫೀದೀಮಿನಿಂದ ಹೊರಟು, ಸೀನಾಯಿ ಮರುಭೂಮಿಗೆ ಬಂದು, ಮರುಭೂಮಿಯಲ್ಲಿ ಡೇರೆ ಹಾಕಿ, ಬೆಟ್ಟಕ್ಕೆದುರಾಗಿ ಇಳಿದುಕೊಂಡರು.