Exodus 19:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಮೋಶೆಗೆ, “ಕೆಳಗಿಳಿದು ಹೋಗಿ, ಜನರು ನನ್ನನ್ನು ನೋಡಲು ನನ್ನ ಹತ್ತಿರ ಬರಬಾರದೆಂದು ಅವರನ್ನು ಎಚ್ಚರಿಸು. ಇಲ್ಲವಾದರೆ ಅವರಲ್ಲಿ ಅನೇಕರು ಸಾಯುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಗಡಿಯನ್ನು ದಾಟಿ ಯೆಹೋವನ ಹತ್ತಿರಕ್ಕೆ ಬಂದರೆ ಅವರಲ್ಲಿ ಬಹಳ ಜನರು ನಾಶವಾಗುವರು.
Kannada BSI Bible 2016
ಕರ್ತನು ಮೋಶೆಗೆ--ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ಕರ್ತನನ್ನು ನೋಡುವದಕ್ಕಾಗಿ ಮುಂದೆ ಬಂದು ಅವರಲ್ಲಿ ಬಹಳ ಜನರು ಸತ್ತಾರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೆಹೋವನು ಮೋಶೆಗೆ - ನೀನಿಳಿದು ಹೋಗಿ ಜನರನ್ನು ಎಚ್ಚರಿಸಬೇಕು; ಅವರು ನೋಡಬೇಕೆಂಬ ಆಶೆಯಿಂದ ಯೆಹೋವನ ಹತ್ತಿರಕ್ಕೆ ಮೇರೆಯನ್ನು ದಾಟಿ ಬಂದಾರು; ಹಾಗೆ ಬಂದರೆ ಬಹುಜನ ನಾಶವಾಗುವರು.
Kannada Bible (KNCL) BSI 2016
ಆಗ ಸರ್ವೇಶ್ವರ ಮೋಶೆಗೆ, “ನೀನಿಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಸರ್ವೇಶ್ವರನಾದ ನನ್ನ ಹತ್ತಿರಕ್ಕೆ ಮೇರೆಯನ್ನು ದಾಟಿ ಬಂದಾರು; ಹಾಗೆ ಬಂದರೆ ಬಹುಜನ ನಾಶವಾಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ಯೆಹೋವ ದೇವರನ್ನು ನೋಡುವದಕ್ಕಾಗಿ ಮುಂದೆ ಬಂದರೆ, ಅವರಲ್ಲಿ ಬಹಳ ಜನರು ಸಾಯುವರು.