Exodus 19:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಯೆಹೋವನಿಗೆ, “ಜನರು ಬೆಟ್ಟವನ್ನೇರಿ ಬರಲಾರರು. ಬೆಟ್ಟದ ಸುತ್ತಲೂ ಮೇರೆಯನ್ನು ಹಾಕಿ ಅದನ್ನು ಪವಿತ್ರ ಸ್ಧಳವನ್ನಾಗಿ ಪ್ರತ್ಯೇಕಿಸಬೇಕೆಂದು ನೀನೇ ನಮಗೆ ಎಚ್ಚರಿಕೆ ನೀಡಿದೆಯಲ್ಲಾ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಮೋಶೆ ಯೆಹೋವನಿಗೆ, “ಜನರು ಸೀನಾಯಿ ಬೆಟ್ಟವನ್ನೇರುವುದಕ್ಕೆ ಆಗುವುದಿಲ್ಲ. ಯಾಕೆಂದರೆ ‘ಬೆಟ್ಟದ ಸುತ್ತಲೂ ಗಡಿಯನ್ನು ಹಾಕಿ ನಿನಗಾಗಿ ಶುದ್ಧಮಾಡು’” ಎಂದು ಆಜ್ಞಾಪಿಸಿರುವೆಯಲ್ಲಾ ಎಂದನು.
Kannada BSI Bible 2016
ಮೋಶೆಯು ಕರ್ತನಿಗೆ--ಜನರು ಸೀನಾಯಿ ಬೆಟ್ಟವನ್ನು ಏರಲಾರರು. ಬೆಟ್ಟಕ್ಕೆ ಮೇರೆಗಳನ್ನು ಹಾಕಿ ಅದನ್ನು ಶುದ್ಧಮಾಡೆಂದು ನೀನೇ ನಮ್ಮನ್ನು ಎಚ್ಚರಿಸಿದ್ದೀ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಮೋಶೆ - ಸೀನಾಯಿಬೆಟ್ಟವನ್ನೇರುವದಕ್ಕೆ ಜನರಿಂದಾಗದು; ಬೆಟ್ಟದ ಸುತ್ತಲೂ ಮೇರೆಯನ್ನು ಹಾಕಿ ನಿನಗಾಗಿ ಪ್ರತ್ಯೇಕಿಸಲಿಕ್ಕೆ ನೀನು ಆಜ್ಞಾಪಿಸಿದಿಯಲ್ಲಾ ಅಂದನು.
Kannada Bible (KNCL) BSI 2016
ಅದಕ್ಕೆ ಮೋಶೆ, “ಸೀನಾಯಿ ಬೆಟ್ಟವನ್ನೇರುವುದಕ್ಕೆ ಜನರಿಂದಾಗದು. ನೀವು ಆಜ್ಞಾಪಿಸಿದಂತೆ ನಿಮಗಾಗಿ ಪ್ರತ್ಯೇಕಿಸಿಡಲು ಬೆಟ್ಟದ ಸುತ್ತಲೂ ಮೇರೆಯನ್ನು ಹಾಕಿಸಿದ್ದೇನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಯೆಹೋವ ದೇವರಿಗೆ, “ಜನರು ಸೀನಾಯಿ ಬೆಟ್ಟವನ್ನು ಏರಲಾರರು. ಬೆಟ್ಟಕ್ಕೆ ಮೇರೆಗಳನ್ನು ಹಾಕಿ ಅದನ್ನು ಶುದ್ಧಮಾಡೆಂದು ನೀವೇ ನಮ್ಮನ್ನು ಎಚ್ಚರಿಸಿದ್ದೀರಿ,” ಎಂದನು.