Exodus 19:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಅವನಿಗೆ, “ಜನರ ಬಳಿಗೆ ಇಳಿದುಹೋಗಿ ಆರೋನನನ್ನು ಕರೆದುಕೊಂಡು ಬಾ. ಆದರೆ ಯಾಜಕರಾಗಲಿ ಜನರಾಗಲಿ ಬರಕೂಡದು. ಅವರು ನನ್ನ ಸಮೀಪಕ್ಕೆ ಬಂದರೆ, ನಾನು ಅವರನ್ನು ದಂಡಿಸುವೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಗೆ, “ನೀನು ಇಳಿದುಹೋಗಿ ಆರೋನನ್ನು ನಿನ್ನ ಸಂಗಡ ಕರೆದುಕೊಂಡು ಮೇಲಕ್ಕೆ ಬಾ. ಆದರೆ ಯಾಜಕರೂ, ಜನರೂ ಆ ಗಡಿಯನ್ನು ದಾಟಿ ಯೆಹೋವನ ಹತ್ತಿರ ಬರಬಾರದು. ದಾಟಿ ಬಂದರೆ ನಾನು ಅವರನ್ನು ಪಕ್ಕನೇ ಸಂಹಾರ ಮಾಡುವೆನು” ಎಂದು ಹೇಳಿದನು.
Kannada BSI Bible 2016
ಆಗ ಕರ್ತನು ಅವನಿಗೆ--ನೀನು ಇಳಿದು ಹೋಗಿ ಆರೋನ ನನ್ನು ಕರಕೊಂಡು ಇಲ್ಲಿಗೆ ಬಾ. ಆದರೆ ಕರ್ತನು ಅವರನ್ನು ಸಾಯಿಸದಂತೆ ಯಾಜಕರೂ ಜನರೂ ಮುಂದೆ ಕರ್ತನ ಬಳಿಗೆ ಬಾರದೆ ಇರಲಿ ಅಂದನು.ಹೀಗೆ ಮೋಶೆಯು ಜನರ ಬಳಿಗೆ ಇಳಿದುಹೋಗಿ ಅವರೊಂದಿಗೆ ಮಾತನಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಅವನಿಗೆ - ನೀನು ಇಳಿದು ಹೋಗಿ ಆರೋನನನ್ನು ಕರೆದುಕೊಂಡು ಮೇಲಕ್ಕೆ ಬಾ; ಆದರೆ ಯಾಜಕರೂ ಜನರೂ ಆ ಮೇರೆಯನ್ನು ದಾಟಿ ಯೆಹೋವನ ಹತ್ತಿರ ಬರಕೂಡದು; ದಾಟಿದರೆ ಯೆಹೋವನು ಅವರನ್ನು ಫಕ್ಕನೆ ಸಂಹಾರ ಮಾಡಾನು ಎಂದು ಹೇಳಿದನು.
Kannada Bible (KNCL) BSI 2016
ಸರ್ವೇಶ್ವರ ಅವನಿಗೆ, “ನೀನು ಇಳಿದು ಹೋಗಿ ಆರೋನನನ್ನು ಕರೆದುಕೊಂಡು ಮೇಲಕ್ಕೆ ಬಾ; ಆದರೆ ಯಾಜಕರು ಹಾಗು ಜನರು ಆ ಮೇರೆಯನ್ನು ದಾಟಿ ನನ್ನ ಹತ್ತಿರ ಬರಕೂಡದು; ದಾಟಿ ಬಂದರೆ ಅವರನ್ನು ತಟ್ಟನೆ ನಾಶಮಾಡಬಹುದು ಎಂದು ಹೇಳು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಅವನಿಗೆ, “ನೀನು ಇಳಿದು ಹೋಗಿ, ಆರೋನನನ್ನು ಕರೆದುಕೊಂಡು ಇಲ್ಲಿಗೆ ಬಾ. ಆದರೆ ಯೆಹೋವ ದೇವರಿಂದ ಸಂಹಾರವಾಗದಂತೆ ಯಾಜಕರೂ ಜನರೂ ಮುಂದೆ ಯೆಹೋವ ದೇವರ ಬಳಿಗೆ ಬಾರದೇ ಇರಲಿ,” ಎಂದರು.