Exodus 19:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಮೋಶೆ ಬೆಟ್ಟವನ್ನೇರಿ ಯೆಹೋವನ ಸನ್ನಿಧಿಗೆ ಹೋದನು. ಮೋಶೆಯು ಬೆಟ್ಟದ ಮೇಲೆ ಇದ್ದಾಗ ಯೆಹೋವನು ಅವನಿಗೆ, “ಯಾಕೋಬನ ಮಹಾ ಕುಟುಂಬವಾದ ಇಸ್ರೇಲರಿಗೆ ಈ ಸಂಗತಿಗಳನ್ನು ಹೇಳು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಹೋದನು. ಆಗ ಯೆಹೋವನು ಬೆಟ್ಟದ ಮೇಲಿಂದ ಮೋಶೆಯನ್ನು ಕರೆದು ಅವನಿಗೆ, “ನೀನು ಯಾಕೋಬನ ಮನೆತನದವರಾದ ಇಸ್ರಾಯೇಲರಿಗೆ ಈ ಮಾತುಗಳನ್ನು ತಿಳಿಸಿ ಹೇಳಬೇಕು.
Kannada BSI Bible 2016
ಮೋಶೆಯು ದೇವರ ಸನ್ನಿಧಿಗೆ ಹೋದನು. ಆಗ ಕರ್ತನು ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ--ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಹೋದಾಗ ಯೆಹೋವನು ಅವನಿಗೆ ಬೆಟ್ಟದ ಮೇಲಿನಿಂದ ಕೂಗಿ - ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್ಯರಿಗೆ ಈ ಮಾತುಗಳನ್ನು ಹೇಳಬೇಕು;
Kannada Bible (KNCL) BSI 2016
ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಬಂದನು. ಸರ್ವೇಶ್ವರ ಸ್ವಾಮಿ ಬೆಟ್ಟದ ಮೇಲಿಂದ ಕೂಗಿ ಅವನಿಗೆ, “ನೀನು ಯಕೋಬನ ಮನೆತನದವರಾದ ಇಸ್ರಯೇಲರಿಗೆ ಈ ಮಾತುಗಳನ್ನು ಹೇಳು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ದೇವರ ಸನ್ನಿಧಿಗೆ ಬೆಟ್ಟದ ಮೇಲೆ ಹೋದನು. ಆಗ ಯೆಹೋವ ದೇವರು ಸೀನಾಯಿ ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ, “ನೀನು ಯಾಕೋಬನ ಮನೆತನದವರಾದ ಇಸ್ರಾಯೇಲರಿಗೆ ಇದನ್ನು ತಿಳಿಸು: