Exodus 19:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಮೋಶೆ ಬೆಟ್ಟದಿಂದಿಳಿದು ಬಂದು ಜನರ ಹಿರಿಯರನ್ನು ಒಟ್ಟಾಗಿ ಕರೆಸಿದನು. ಯೆಹೋವನು ಹೇಳಬೇಕೆಂದು ಆಜ್ಞಾಪಿಸಿದ ಸಂಗತಿಗಳನ್ನೆಲ್ಲಾ ಮೋಶೆಯು ಹಿರಿಯರಿಗೆ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮೋಶೆ ಬಂದು ಜನರ ಹಿರಿಯರನ್ನು ಒಟ್ಟಾಗಿ ಸೇರಿಸಿದನು. ಯೆಹೋವನು ಆಜ್ಞಾಪಿಸಿದ್ದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು.
Kannada BSI Bible 2016
ಆಗ ಮೋಶೆಯು ಬಂದು ಜನರ ಹಿರಿಯರನ್ನು ಕರೆದು ಕರ್ತನು ತನಗೆ ಆಜ್ಞಾಪಿಸಿದ ಈ ಮಾತುಗ ಳನ್ನೆಲ್ಲಾ ಅವರ ಮುಂದೆ ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮೋಶೆ ಬಂದು ಜನರ ಹಿರಿಯರನ್ನು ಕೂಡಿಸಿ ಯೆಹೋವನು ಆಜ್ಞಾಪಿಸಿದ್ದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು.
Kannada Bible (KNCL) BSI 2016
ಮೋಶೆ ಇಳಿದುಬಂದು ಜನರ ಹಿರಿಯರನ್ನು ಕೂಡಿಸಿ, ಸರ್ವೇಶ್ವರ ಆಜ್ಞಾಪಿಸಿದ್ದ ಆ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯು ಇಳಿದುಬಂದು ಜನರ ಹಿರಿಯರನ್ನು ಕರೆದು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಈ ಮಾತುಗಳನ್ನೆಲ್ಲಾ ಅವರ ಮುಂದೆ ಇಟ್ಟನು.