Exodus 19:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರೆಲ್ಲರೂ ಒಟ್ಟಾಗಿ ಮಾತಾಡಿದರು. “ಯೆಹೋವನು ಹೇಳುವ ಪ್ರತಿಯೊಂದಕ್ಕೂ ನಾವು ವಿಧೇಯರಾಗುವೆವು” ಎಂದು ಅವರು ಅರಿಕೆಮಾಡಿದರು. ಬಳಿಕ ಮೋಶೆಯು ತಿರುಗಿ ಬೆಟ್ಟವನ್ನೇರಿ ಯೆಹೋವನ ಸನ್ನಿಧಿಗೆ ಹೋಗಿ ಜನರ ಪ್ರತಿಕ್ರಿಯೆಯನ್ನು ದೇವರಿಗೆ ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರೆಲ್ಲರೂ ಒಗ್ಗಟ್ಟಾಗಿ, “ಯೆಹೋವನು ಹೇಳಿದಂತೆಯೇ ಮಾಡುವೆವು” ಎಂದು ಉತ್ತರಕೊಟ್ಟರು. ಮೋಶೆ ಯೆಹೋವನ ಬಳಿಗೆ ಹಿಂತಿರುಗಿ ಹೋಗಿ ಅವರು ಹೇಳಿದ ಮಾತುಗಳನ್ನು ಆತನಿಗೆ ಹೇಳಿದನು.
Kannada BSI Bible 2016
ಜನರೆಲ್ಲಾ ಏಕವಾಗಿ ಉತ್ತರ ಕೊಟ್ಟು--ಕರ್ತನು ಹೇಳಿದವುಗಳನ್ನೆಲ್ಲಾ ಮಾಡುತ್ತೇವೆ ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿರಿಗಿ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರೆಲ್ಲರೂ - ಯೆಹೋವನು ಹೇಳಿದಂತೆಯೇ ಮಾಡುವೆವು ಎಂದು ಒಗ್ಗಟ್ಟಾಗಿ ಪ್ರತ್ಯುತ್ತರ ಕೊಡಲಾಗಿ ಮೋಶೆ ಯೆಹೋವನ ಬಳಿಗೆ ಹೋಗಿ ಅವರ ಮಾತುಗಳನ್ನು ಆತನಿಗೆ ಅರಿಕೆ ಮಾಡಿದನು.
Kannada Bible (KNCL) BSI 2016
ಜನರೆಲ್ಲರು, “ಸರ್ವೇಶ್ವರ ಸ್ವಾಮಿ ಹೇಳಿದಂತೆಯೇ ನಾವು ಮಾಡುತ್ತೇವೆ,” ಎಂದು ಒಕ್ಕೊರಲಿನಿಂದ ಉತ್ತರಕೊಟ್ಟರು. ಮೋಶೆ ಸರ್ವೇಶ್ವರನ ಬಳಿಗೆ ಹೋಗಿ ಜನರ ಆ ಉತ್ತರವನ್ನು ಅರಿಕೆ ಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರೆಲ್ಲಾ ಒಂದಾಗಿ ಉತ್ತರಕೊಟ್ಟು, “ಯೆಹೋವ ದೇವರು ಹೇಳಿದ್ದನ್ನೆಲ್ಲಾ ಮಾಡುತ್ತೇವೆ,” ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಯೆಹೋವ ದೇವರಿಗೆ ಹೇಳಿದನು.