Exodus 19:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಮೋಶೆಗೆ, “ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುವೆನು. ನಾನು ನಿನ್ನೊಡನೆ ಮಾತಾಡುವೆನು. ನಿನ್ನೊಡನೆ ಮಾತಾಡುವುದನ್ನು ಜನರೆಲ್ಲರೂ ಕೇಳುವರು. ನೀನು ಹೇಳುವ ಸಂಗತಿಗಳನ್ನು ಜನರು ಯಾವಾಗಲೂ ನಂಬಲು ಸಹಾಯವಾಗುವಂತೆ ನಾನು ಇದನ್ನು ಮಾಡುವೆನು” ಎಂದು ಹೇಳಿದನು. ಆಗ ಮೋಶೆಯು ಜನರು ಹೇಳಿದ ಸಂಗತಿಗಳನ್ನೆಲ್ಲಾ ದೇವರಿಗೆ ಅರಿಕೆಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತನಾಡುವಾಗ, ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಮೇಘದೊಳಗಿನಿಂದ ನಿನ್ನ ಬಳಿಗೆ ಬರುತ್ತೇನೆ” ಎಂದು ಹೇಳಿದನು. ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ತಿಳಿಸಿದನು.
Kannada BSI Bible 2016
ಕರ್ತನು ಮೋಶೆಗೆ--ಇಗೋ, ನಾನು ನಿನ್ನ ಸಂಗಡ ಮಾತನಾಡುವದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ಮಂದ ವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ ಅಂದನು. ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿಳಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆಗೆ - ಇಗೋ ನಾನು ನಿನ್ನ ಸಂಗಡ ಮಾತಾಡುವಾಗ ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುವೆನು ಎಂದು ಹೇಳಿದನು.
Kannada Bible (KNCL) BSI 2016
ಸರ್ವೇಶ್ವರ ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತಾಡುವುದನ್ನು ಜನರು ಕೇಳುವಂತೆಯೂ ಎಂದಿಗೂ ನಿನ್ನನ್ನು ನಂಬುವಂತೆಯೂ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುತ್ತೇನೆ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೋಶೆಗೆ, “ನಾನು ನಿನ್ನ ಸಂಗಡ ಮಾತನಾಡುವುದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ದಟ್ಟವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ,” ಎಂದರು. ಮೋಶೆಯು ಜನರ ಮಾತುಗಳನ್ನು ಯೆಹೋವ ದೇವರಿಗೆ ತಿಳಿಸಿದನು.