Exodus 2:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಗುವು ಬೆಳೆಯಿತು. ಸ್ವಲ್ಪಕಾಲದ ನಂತರ ಆ ಸ್ತ್ರೀಯು ಬಾಲಕನನ್ನು ರಾಜನ ಮಗಳ ಬಳಿಗೆ ಕರೆದುಕೊಂಡು ಬಂದಳು. ರಾಜನ ಮಗಳು ಆ ಬಾಲಕನನ್ನು ತನ್ನ ಸ್ವಂತ ಮಗನೆಂದು ಸ್ವೀಕರಿಸಿದಳು. ಆ ಬಾಲಕನನ್ನು ನೀರಿನೊಳಗಿಂದ ಎಳೆದೆನೆಂದು ಆ ಬಾಲಕನಿಗೆ “ಮೋಶೆ” ಎಂದು ಹೆಸರಿಟ್ಟಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಹುಡುಗನು ಬೆಳೆದಾಗ, ಅವನನ್ನು ಫರೋಹನ ಮಗಳ ಬಳಿಗೆ ತೆಗೆದುಕೊಂಡು ಬಂದಳು, ಅವನು ಆಕೆಗೆ ಮಗನಾದನು. “ಇವನನ್ನು ನೀರಿನೊಳಗಿನಿಂದ ಎಳೆದುಕೊಂಡಿದ್ದೇನೆ,” ಎಂದು ಹೇಳಿ ಆಕೆಯು ಅವನಿಗೆ “ಮೋಶೆ ” ಎಂದು ಹೆಸರಿಟ್ಟಳು.
Kannada BSI Bible 2016
ಈ ಮಗುವು ಬೆಳೆದಾಗ ಅವನನ್ನು ಫರೋಹನ ಮಗಳ ಬಳಿಗೆ ತಕ್ಕೊಂಡುಹೋದಳು. ಅವನು ಆಕೆಗೆ ಮಗನಾದನು. ಆಕೆಯು--ಇವನನ್ನು ನೀರಿನೊಳಗಿಂದ ಎಳೆದೆನೆಂದು ಹೇಳಿ ಅವನಿಗೆ ಮೋಶೆ ಎಂದು ಹೆಸರಿಟ್ಟಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹುಡುಗನು ಬೆಳೆದಾಗ ಅವನನ್ನು ಫರೋಹನ ಕುಮಾರ್ತೆಯ ಬಳಿಗೆ ತೆಗೆದುಕೊಂಡು ಬಂದಳು; ಅವನು ಆಕೆಗೆ ಮಗನಾದನು. ಇವನನ್ನು ನೀರಿನೊಳಗಿಂದ ಎಳೆದಿದ್ದೇನೆಂದು ಹೇಳಿ ಆಕೆ ಅವನಿಗೆ ಮೋಶೆ ಎಂದು ಹೆಸರಿಟ್ಟಳು.
Kannada Bible (KNCL) BSI 2016
ಆ ಹುಡುಗನು ಬೆಳೆದಾಗ ಅವನನ್ನು ಫರೋಹನ ಪುತ್ರಿಯ ಬಳಿಗೆ ಕರೆದುಕೊಂಡು ಬಂದಳು. ಅವನು ಆಕೆಗೆ ಮಗನಾದನು. “ನೀರಿನಿಂದ ನಾನು ಇವನನ್ನು ಎತ್ತಿದೆ” ಎಂದು ಹೇಳಿ ಆಕೆ ಅವನಿಗೆ “ಮೋಶೆ\ ಎಂದು ಹೆಸರಿಟ್ಟಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮಗುವು ಬೆಳೆದಾಗ, ಅವನನ್ನು ಫರೋಹನ ಮಗಳ ಬಳಿಗೆ ತೆಗೆದುಕೊಂಡು ಹೋದಳು. ಅವನು ಆಕೆಗೆ ಮಗನಾದನು. ಆಕೆಯು, “ನೀರಿನೊಳಗಿಂದ ಇವನನ್ನು ಎಳೆದೆ,” ಎಂದು ಹೇಳಿ ಅವನಿಗೆ “ಮೋಶೆ” ಎಂದು ಹೆಸರಿಟ್ಟಳು.