Exodus 2:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ಸುತ್ತಲೂ ನೋಡಿ ಯಾರೂ ಗಮನಿಸುತ್ತಿಲ್ಲವೆಂದು ತಿಳಿದುಕೊಂಡು ಈಜಿಪ್ಟಿನವನನ್ನು ಕೊಂದು ಮರಳಿನಲ್ಲಿ ಮುಚ್ಚಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಅತ್ತಿತ್ತ ನೋಡಿ, ಯಾರೂ ಇಲ್ಲವೆಂದು ತಿಳಿದು, ಆ ಐಗುಪ್ತ್ಯದವನನ್ನು ಹೊಡೆದು ಕೊಂದುಹಾಕಿ ಅವನ ಶವವನ್ನು ಮರಳಿನಲ್ಲಿ ಮುಚ್ಚಿಹಾಕಿದನು.
Kannada BSI Bible 2016
ಅವನು ಅತ್ತಿತ್ತ ನೋಡಿ ಯಾರೂ ಇಲ್ಲವೆಂದು ತಿಳಿದು ಐಗುಪ್ತ್ಯ ನನ್ನು ಕೊಂದು ಮರಳಿನಲ್ಲಿ ಮುಚ್ಚಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಅತ್ತಿತ್ತ ನೋಡಿ ಯಾರೂ ಇಲ್ಲವೆಂದು ತಿಳಿದು ಆ ಐಗುಪ್ತ್ಯನನ್ನು ಹೊಡೆದುಹಾಕಿ ಅವನ ಶವವನ್ನು ಮರಳಿನಲ್ಲಿ ಮುಚ್ಚಿಟ್ಟನು.
Kannada Bible (KNCL) BSI 2016
ಒಮ್ಮೆ ಒಬ್ಬ ಈಜಿಪ್ಟಿನವನು ತನ್ನ ದೇಶೀಯನಾದ ಹಿಬ್ರಿಯನನ್ನು ಹೊಡೆಯುವುದನ್ನು ಕಂಡನು. ಅತ್ತಿತ್ತ ನೋಡಿ, ಯಾರೂ ಇಲ್ಲ ಎಂದು ತಿಳಿದು, ಆ ಈಜಿಪ್ಟನನ್ನು ಹೊಡೆದು ಹಾಕಿ ಅವನ ಶವವನ್ನು ಮರಳಿನಲ್ಲಿ ಮುಚ್ಚಿಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಸುತ್ತಮುತ್ತ ನೋಡಿ, ಯಾರೂ ಇಲ್ಲವೆಂದು ತಿಳಿದು ಆ ಈಜಿಪ್ಟಿನವನನ್ನು ಕೊಂದುಹಾಕಿ, ಮರಳಿನಲ್ಲಿ ಮುಚ್ಚಿಹಾಕಿದನು.