Exodus 2:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಆ ಮನುಷ್ಯನು, “ನಿನ್ನನ್ನು ನಮ್ಮ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು? ನಿನ್ನೆ ಆ ಈಜಿಪ್ಟಿನವನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿರುವಿಯೋ?” ಎಂದು ಉತ್ತರಿಸಿದನು. ಆಗ ಮೋಶೆಗೆ ಭಯವಾಯಿತು. ಮೋಶೆಯು ತನ್ನೊಳಗೆ, “ನಾನು ಮಾಡಿದ್ದು ಪ್ರತಿಯೊಬ್ಬರಿಗೂ ತಿಳಿದಿದೆ” ಅಂದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮನುಷ್ಯನು ಅವನಿಗೆ, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ, ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದು ಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದಿಯೋ?” ಅಂದನು. ಈ ಮಾತನ್ನು ಕೇಳಿ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ಬಯಲಿಗೆ ಬಂತಲ್ಲಾ” ಅಂದುಕೊಂಡನು.
Kannada BSI Bible 2016
ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮನುಷ್ಯನು - ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಈ ಮಾತನ್ನು ಕೇಳಿ ಮೋಶೆ - ಆ ಕಾರ್ಯವು ಬೈಲಿಗೆ ಬಂತಲ್ಲಾ ಅಂದುಕೊಂಡು ಅಂಜಿದನು.
Kannada Bible (KNCL) BSI 2016
ಅದಕ್ಕೆ ಅವನು, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿ ಹಾಗೂ ನ್ಯಾಯಾಧಿಪತಿಯನ್ನಾಗಿ ನೇಮಿಸಿದವರು ಯಾರು? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನು ಕೊಂದುಹಾಕಬೇಕೆಂದಿರುವೆಯಾ?” ಎಂದನು. ಈ ಮಾತನ್ನು ಕೇಳಿದ್ದೇ ಮೋಶೆ, “ನಾನು ಮಾಡಿದ ಕಾರ್ಯ ಬಯಲಾಗಿಬಿಟ್ಟಿತಲ್ಲಾ!” ಎಂದು ಅಂಜಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕವನು, “ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿದ್ದಾರೆ? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದು ಹಾಕಬೇಕೆಂದಿದ್ದೀಯೋ?” ಎಂದನು. ಆಗ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ತಿಳಿದಿರಬೇಕು,” ಎಂದುಕೊಂಡನು.