Exodus 2:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ಮಾಡಿದ್ದು ಫರೋಹನಿಗೂ ತಿಳಿಯಿತು. ಆದ್ದರಿಂದ ಮೋಶೆಯನ್ನು ಕೊಲ್ಲಿಸಲು ಅವನು ತೀರ್ಮಾನಿಸಿದನು. ಆದರೆ ಮೋಶೆ ಫರೋಹನ ಬಳಿಯಿಂದ ಮಿದ್ಯಾನ್ ದೇಶಕ್ಕೆ ಓಡಿಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಡೆದ ಸಂಗತಿಯು ಫರೋಹನಿಗೆ ತಿಳಿದುಬಂದಾಗ, ಅವನು ಮೋಶೆಯನ್ನು ಕೊಲ್ಲಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆಯು ಫರೋಹನ ಬಳಿಯಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದ ಒಂದು ಬಾವಿಯ ಬಳಿಯಲ್ಲಿ ಕುಳಿತುಕೊಂಡನು.
Kannada BSI Bible 2016
ಫರೋಹನು ಈ ಮಾತುಗಳನ್ನು ಕೇಳಿ ಮೋಶೆ ಯನ್ನು ಕೊಲ್ಲಲು ಹುಡುಕಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್‌ ದೇಶದಲ್ಲಿದ್ದು ಒಂದು ಬಾವಿಯ ಬಳಿಯಲ್ಲಿ ಕೂತು ಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಡೆದ ಸಂಗತಿಯು ಫರೋಹನಿಗೆ ತಿಳಿದುಬಂದಾಗ ಅವನು ಮೋಶೆಯನ್ನು ಕೊಲ್ಲಿಸಬೇಕೆಂದು ಆಲೋಚಿಸಿದ್ದರಿಂದ ಮೋಶೆ ಫರೋಹನ ಬಳಿಯಿಂದ ಓಡಿಹೋಗಿ ವಿುದ್ಯಾನ್ ದೇಶವನ್ನು ಸೇರಿದನು.
Kannada Bible (KNCL) BSI 2016
ನಡೆದ ಸಂಗತಿ ಫರೋಹನಿಗೆ ಮುಟ್ಟಿತು. ಅವನು ಮೋಶೆಯನ್ನು ಕೊಲ್ಲಿಸಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆ ಫರೋಹನ ಬಳಿಯಿಂದ ಪಲಾಯನಗೈದು ಮಿದ್ಯಾನ್ ನಾಡನ್ನು ಸೇರಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರೋಹನು ಈ ವಿಷಯವನ್ನು ಕೇಳಿದಾಗ, ಮೋಶೆಯನ್ನು ಕೊಂದುಹಾಕುವುದಕ್ಕೆ ಪ್ರಯತ್ನಿಸಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್ ದೇಶಕ್ಕೆ ವಾಸಿಸಲು ಹೋದನು. ಅಲ್ಲಿ ಒಂದು ಬಾವಿಯ ಬಳಿಯಲ್ಲಿ ಕೂತುಕೊಂಡನು.