Exodus 2:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ಮಿದ್ಯಾನ್ಯರ ಒಂದು ಬಾವಿಯ ಬಳಿ ಕುಳಿತುಕೊಂಡಿದ್ದನು. ಮಿದ್ಯಾನ್ಯರ ಒಬ್ಬ ಪುರೋಹಿತನಿಗೆ ಏಳು ಮಂದಿ ಹೆಣ್ಣುಮಕ್ಕಳಿದ್ದರು. ಆ ಹುಡುಗಿಯರು ಬಂದು ತಮ್ಮ ತಂದೆಯ ಕುರಿಗಳಿಗೆ ನೀರನ್ನು ಕುಡಿಸಲು ಬಾವಿಯಿಂದ ನೀರು ಸೇದಿ ತೊಟ್ಟಿಗಳಲ್ಲಿ ಹಾಕುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಿದ್ಯಾನರ ಯಾಜಕನಿಗೆ ಏಳು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಬಂದು ತಮ್ಮ ತಂದೆಯ ಕುರಿ ಮಂದೆಗಳಿಗೆ ನೀರು ಕುಡಿಸುವುದಕ್ಕಾಗಿ, ನೀರನ್ನು ಸೇದಿ ತೊಟ್ಟಿಗಳಲ್ಲಿ ತುಂಬಿಸುತ್ತಿದ್ದರು.
Kannada BSI Bible 2016
ಮಿದ್ಯಾನಿನ ವೈದಿಕನಿಗೆ ಏಳು ಮಂದಿ ಕುಮಾರ್ತೆಯರಿದ್ದರು. ಇವರು ಬಂದು ತಮ್ಮ ತಂದೆಯ ಮಂದೆಗಳಿಗೆ ನೀರು ಸೇದಿ ದೋಣಿಗಳನ್ನು ತುಂಬಿಸು ತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಒಂದು ಬಾವಿಯ ಹತ್ತಿರ ಕೂತುಕೊಂಡಿರಲು ವಿುದ್ಯಾನ್ಯರ ಆಚಾರ್ಯನ ಏಳುಮಂದಿ ಹೆಣ್ಣುಮಕ್ಕಳು ಬಂದು ತಂದೆಯ ಕುರಿಗಳಿಗೆ ಕುಡಿಸುವದಕ್ಕೋಸ್ಕರ ನೀರು ಸೇದಿ ದೋಣಿಗಳಲ್ಲಿ ಹಾಕುತ್ತಿದ್ದರು.
Kannada Bible (KNCL) BSI 2016
ಒಂದು ದಿನ ಮೋಶೆ ಆ ನಾಡಿನ ಬಾವಿಯೊಂದರ ಬಳಿ ಕುಳಿತಿದ್ದನು. ಮಿದ್ಯಾನರ ಪೂಜಾರಿಯ ಏಳು ಮಂದಿ ಹೆಣ್ಣು ಮಕ್ಕಳು ಅಲ್ಲಿಗೆ ಬಂದರು. ತಮ್ಮ ತಂದೆಯ ಕುರಿಗಳಿಗೆ ನೀರು ಕುಡಿಸುವುದಕ್ಕಾಗಿ ನೀರು ಸೇದಿ ತೊಟ್ಟಿಗಳಲ್ಲಿ ತುಂಬುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಿದ್ಯಾನಿನ ಯಾಜಕನಿಗೆ ಏಳುಮಂದಿ ಪುತ್ರಿಯರಿದ್ದರು. ಇವರು ಬಂದು ತಮ್ಮ ತಂದೆಯ ಕುರಿಮಂದೆಗಳಿಗೆ ನೀರು ಕುಡಿಸುವದಕ್ಕಾಗಿ ನೀರು ಸೇದಿ, ದೋಣಿಗಳನ್ನು ತುಂಬಿಸುತ್ತಿದ್ದರು.