Exodus 2:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಷ್ಟರಲ್ಲಿ ಅಲ್ಲಿಗೆ ಬಂದ ಕೆಲವು ಕುರುಬರು ನೀರು ಸೇದಲು ಅವರಿಗೆ ಅಡ್ಡಿಮಾಡಿದ್ದರಿಂದ ಮೋಶೆಯು ಅವರಿಗೆ ಸಹಾಯಕನಾಗಿ ಬಂದು ಅವರ ಕುರಿಗಳಿಗೆ ನೀರು ಕುಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕುರುಬರು ಬಂದು ಅವರನ್ನು ಬಾವಿಯ ಬಳಿಯಿಂದ ಓಡಿಸಲು, ಮೋಶೆಯು ಅವರಿಗೆ ಸಹಾಯಕನಾಗಿ ಬಂದು ಅವರ ಕುರಿಗಳಿಗೆ ನೀರನ್ನು ಕುಡಿಸಿದನು.
Kannada BSI Bible 2016
ಕುರುಬರು ಬಂದು ಅವರನ್ನು ಓಡಿಸುತ್ತಿ ದ್ದಾಗ ಮೋಶೆಯು ಎದ್ದು ಅವರಿಗೆ ಸಹಾಯ ಮಾಡಿ ಅವರ ಕುರಿಗಳಿಗೆ ನೀರು ಕುಡಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕುರುಬರು ಬಂದು ಅವರನ್ನು ಬಾವಿಯ ಬಳಿಯಿಂದ ಓಡಿಸಲು ಮೋಶೆ ಅವರಿಗೆ ಸಹಾಯವಾಗಿ ಬಂದು ಅವರ ಕುರಿಗಳಿಗೆ ಕುಡಿಸಿದನು.
Kannada Bible (KNCL) BSI 2016
ಕುರುಬರು ಬಂದು ಅವರನ್ನು ಬಾವಿಯ ಬಳಿಯಿಂದ ಓಡಿಸಲೆತ್ನಿಸಿದರು. ಮೋಶೆ ಆ ಹುಡುಗಿಯರಿಗೆ ಸಹಾಯವಾಗಿ ಬಂದು ಅವರ ಕುರಿಗಳಿಗೆ ನೀರನ್ನು ಕುಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುರುಬರು ಬಂದು ಅವರನ್ನು ಅಲ್ಲಿಂದ ಓಡಿಸಲು, ಮೋಶೆಯು ಎದ್ದು ಬಂದು ಅವರಿಗೆ ಸಹಾಯಮಾಡಿ, ಅವರ ಕುರಿಗಳಿಗೆ ನೀರು ಕುಡಿಸಿದನು.