Exodus 2:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಹುಡುಗಿಯರು, “ಕುರುಬರು ನಮಗೆ ಅಡ್ಡಿ ಮಾಡಿದಾಗ ಈಜಿಪ್ಟಿನವನೊಬ್ಬನು ನಮ್ಮ ನೆರವಿಗೆ ಬಂದು ನಮಗೂ ನಮ್ಮ ಕುರಿಗಳಿಗೂ ನೀರು ಸೇದಿ ಕೊಟ್ಟನು” ಎಂದು ಉತ್ತರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವರು, “ಐಗುಪ್ತದವನಾದ ಒಬ್ಬ ಮನುಷ್ಯನು ನಮ್ಮನ್ನು ಕುರುಬರ ಕೈಯಿಂದ ತಪ್ಪಿಸಿದಲ್ಲದೆ, ಅವನು ನಮಗೋಸ್ಕರ ನೀರು ಸೇದಿ ಕುರಿಗಳಿಗೆ ಕುಡಿಸಿದನು” ಅಂದರು.
Kannada BSI Bible 2016
ಅದಕ್ಕೆ ಅವರು--ಐಗುಪ್ತ್ಯನಾದ ಒಬ್ಬ ಮನುಷ್ಯನು ಕುರುಬರ ಕೈಗೆ ನಮ್ಮನ್ನು ತಪ್ಪಿಸಿ ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ ಮಂದೆಗೆ ಕುಡಿಸಿದನು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತ್ಯನಾದ ಒಬ್ಬ ಮನುಷ್ಯನು ನಮ್ಮನ್ನು ಕುರುಬರ ಕೈಗೆ ತಪ್ಪಿಸಿದನು; ಇಷ್ಟು ಮಾತ್ರವಲ್ಲದೆ ಅವನು ನಮಗೋಸ್ಕರ ನೀರು ಸೇದಿ ಕುರಿಗಳಿಗೆ ಕುಡಿಸಿದನು ಅಂದರು.
Kannada Bible (KNCL) BSI 2016
ಅವರು, “ಈಜಿಪ್ಟಿನವನಾದ ಒಬ್ಬ ಮನುಷ್ಯ ನಮ್ಮನ್ನು ಕುರುಬರ ಕಾಟದಿಂದ ತಪ್ಪಿಸಿದ; ಅದು ಮಾತ್ರವಲ್ಲ, ಅವನು ನಮಗಾಗಿ ನೀರು ಸೇದಿ ಕುರಿಗಳಿಗೆ ಕುಡಿಸಿದ,” ಎಂದು ವಿವರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅವರು, “ಈಜಿಪ್ಟಿನವನಾದ ಒಬ್ಬ ಮನುಷ್ಯನು ಕುರುಬರ ಕೈಯಿಂದ ನಮ್ಮನ್ನು ತಪ್ಪಿಸಿ, ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ, ಮಂದೆಗೆ ಕುಡಿಸಿದನು,” ಎಂದರು.