Exodus 2:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ರೆಗೂವೇಲನು ತನ್ನ ಹೆಣ್ಣುಮಕ್ಕಳಿಗೆ, “ಆ ಮನುಷ್ಯನು ಎಲ್ಲಿದ್ದಾನೆ? ಅವನನ್ನು ನೀವು ಯಾಕೆ ಬಿಟ್ಟುಬಂದಿರಿ? ಅವನನ್ನು ಕರೆಯಿರಿ; ಅವನು ನಮ್ಮೊಂದಿಗೆ ಊಟಮಾಡಲಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು ತನ್ನ ಮಕ್ಕಳಿಗೆ, “ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ನಮ್ಮೊಂದಿಗೆ ಊಟಮಾಡಲಿ” ಎಂದು ಹೇಳಿದನು.
Kannada BSI Bible 2016
ಆಗ ಅವನು ತನ್ನ ಕುಮಾರ್ತೆಯರಿಗೆ--ಅವನು ಎಲ್ಲಿದ್ದಾನೆ? ಆ ಮನುಷ್ಯ ನನ್ನು ಯಾಕೆ ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟ ಮಾಡಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ತಂದೆ ಅವರಿಗೆ - ಆ ಮನುಷ್ಯನೆಲ್ಲಿ? ಅವನನ್ನು ಯಾಕೆ ಬಿಟ್ಟು ಬಂದಿರಿ? ಊಟ ಮಾಡುವದಕ್ಕೆ ಕರೆಯಿರಿ ಎಂದು ಹೇಳಿದನು.
Kannada Bible (KNCL) BSI 2016
ಅವರ ತಂದೆ, “ಆ ಮನುಷ್ಯನೆಲ್ಲಿ? ಅವನನ್ನು ಏಕೆ ಬಿಟ್ಟುಬಂದಿರಿ? ಹೋಗಿ ಅವನನ್ನು ಊಟಕ್ಕೆ ಕರೆದುಕೊಂಡುಹೋಗಿ ತನ್ನಿ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ರೆಯೂವೇಲನು ತನ್ನ ಪುತ್ರಿಯರಿಗೆ, “ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟಮಾಡಲಿ,” ಎಂದನು.