Exodus 2:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋಶೆಯು ರೆಗೂವೇಲನೊಂದಿಗೆ ವಾಸಮಾಡಲು ಇಷ್ಟಪಟ್ಟನು; ರೆಗೂವೇಲನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆ ಮಾಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಆ ಮನುಷ್ಯನೊಂದಿಗೆ ವಾಸಮಾಡಲು ಬಯಸಿದನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿ ಕೊಟ್ಟನು.
Kannada BSI Bible 2016
ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಸಮ್ಮತಿ ಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರ ಳನ್ನು ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಒಪ್ಪಿಕೊಂಡನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಕೊಟ್ಟನು.
Kannada Bible (KNCL) BSI 2016
ಮೋಶೆ ಆ ಮನುಷ್ಯನ ಸಂಗಡ ವಾಸಮಾಡಲು ಒಪ್ಪಿಕೊಂಡನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವುದಕ್ಕೆ ಸಮ್ಮತಿಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರಳನ್ನು ಮದುವೆ ಮಾಡಿಕೊಟ್ಟನು.